Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಮಗನನ್ನು ತಲೆಕೆಳಗಾಗಿ ನೇತುಹಾಕಿದ್ದ ಕುಡಿದ ಮತ್ತಿನಲ್ಲಿದ್ದ ತಂದೆ; ಕೋಲಿನಿಂದ ಹೊಡೆದು ಕೊಂದ ಪತ್ನಿ!

Rain Alert : ಕರ್ನಾಟಕಕ್ಕೆ ಮುಂಗಾರು ಪ್ರವೇಶ : ರಾಜ್ಯಾದ್ಯಂತ ಮುಂದಿನ 7 ದಿನ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ.!

​ಭಾರತ-ಅಮೆರಿಕ ವಾಣಿಜ್ಯ ಒಪ್ಪಂದ: ಜುಲೈ ಮಧ್ಯಭಾಗದೊಳಗೆ ಮೊದಲ ಹಂತದ ಒಪ್ಪಂದಕ್ಕೆ ಸಹಿ ಸಾಧ್ಯತೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆ ಸೇರ್ಪಡೆ : ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ.!
KARNATAKA

BIG NEWS : ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆ ಸೇರ್ಪಡೆ : ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ.!

By kannadanewsnow57

ಗುರುಪುರ : ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ದ್ವಿತೀಯ ವರ್ಷದ ಹೊನಲು ಬೆಳಕಿನ ಮೂಳೂರು- ಅಡ್ಡೂರು ಜೋಡುಕೆರೆ ಕಂಬಳ ಸಮಾರಂಭದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು. “ಈ ಬಾರಿಯ ದಸರಾ ಸಮಿತಿಯ ಉಪಾಧ್ಯಕ್ಷನಾಗಿದ್ದೇನೆ. ದಸರಾ ಹಬ್ಬದಲ್ಲಿ ಇನ್ನು ಮುಂದೆ ಕಂಬಳ ದಕ್ಷಿಣ ಕನ್ನಡದ ಪರಂಪರೆಯಗಿ ಮುಂದುವರೆಯಲಿದೆ. ಮೂರು ಎಕರೆ ಪ್ರದೇಶದಲ್ಲಿ ಕಂಬಳ ಕೆರೆ ನಿರ್ಮಾಣ ಮಾಡುವ ಆಲೋಚನೆಯಿದೆ. ಇದರಿಂದ 25 ಸಾವಿರಕ್ಕೂ ಹೆಚ್ಚು ‌ಜನ ಕಂಬಳ ವೀಕ್ಷಣೆ ಮಾಡಬಹುದು. ನೀವೆಲ್ಲರು ಸೇರಿದರೆ ಸರ್ಕಾರದಿಂದ ಸಹಕಾರ ನೀಡಲಾಗುವುದು. ಕಂಬಳವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಎಲ್ಲರು ಬೆಳೆಸೋಣ” ಎಂದು ಹೇಳಿದರು.

“ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಾಪನೆಯಾದ ಬ್ಯಾಂಕ್ ಗಳಿಂದ ಇಡೀ ದೇಶಕ್ಕೆ ಆರ್ಥಿಕ ಅಡಿಪಾಯ ಸೃಷ್ಟಿಯಾಯಿತು. ಸಾಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕವಾದ ಶ್ರೀಮಂತಿಕೆ ಯಾವ ಜಿಲ್ಲೆಯಲ್ಲಿಯೂ ಇಲ್ಲ. ಕಂಬಳದ ಮೂಲಕ ಇಡೀ ದೇಶದಲ್ಲಿಯೇ ಸಾಂಸ್ಕೃತಿಕವಾಗಿ ಸಾಕ್ಷಿಗುಡ್ಡೆಯನ್ನು ಕಂಬಳ ಕ್ರೀಡೆ ನಿರ್ಮಾಣ ಮಾಡಿದೆ” ಎಂದರು.

“ಈ ಜಿಲ್ಲೆಯ ಧಾರ್ಮಿಕಯೇ ನಿಮ್ಮ ಶಕ್ತಿ. ಹಲವಾರು ಎಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಈ ಜಿಲ್ಲೆಯಲ್ಲಿವೆ. ಈ ಜಿಲ್ಲೆಯ ಯುವಕರ ಬುದ್ಧಿವಂತಿಕೆ ಬೇರೆ ದೇಶಗಳಿಗೆ ಹೋಗುತ್ತಿದೆ. ಇದು ತಪ್ಪಬೇಕು. ಈ ಜಿಲ್ಲೆಗೆ ಪ್ರವಾಸಿ ಕ್ಷೇತ್ರದಲ್ಲಿ ಅತ್ಯಂತ ಅವಕಾಶವಿದೆ. ಇತ್ತೀಚೆಗೆ ಸದನದಲ್ಲಿ ಮಾತನಾಡುತ್ತ ಈ ಭಾಗದ ಶಾಸಕರ ಜೊತೆ ಚರ್ಚೆ ಮಾಡುವಂತೆ ತಿಳಿಸಿದ್ದೆ. ಇಡೀ ದೇಶದ ಯಾವ ರಾಜ್ಯಗಳಿಗೂ ಇಲ್ಲದ ಅತ್ಯಂತ ಉದ್ದದ ಕರಾವಳಿ ನಿಮಗಿದೆ. ಸದ್ಯದಲ್ಲಿಯೇ ಎರಡು ಜಿಲ್ಲೆಗಳ ಶಾಸಕರ ಸಭೆ ನಡೆಸಲಾಗುವುದು” ಎಂದರು.

“ಪ್ರವಾಸೋದ್ಯಮ, ಧಾರ್ಮಿಕ ಕ್ಷೇತ್ರದಲ್ಲಿ ಹೊಸ ಪಾಲಿಸಿಗಳನ್ನು ತಂದು ಯುವಕರ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು. ಇದು ಒಂದು ಪಕ್ಷದ ಜಾತಿಯ,‌ ಧರ್ಮದ ವಿಚಾರವಲ್ಲ. ಇಡೀ ಜಿಲ್ಲೆಯ ಜನರ ಬದುಕಿನ ವಿಚಾರ. ನೀರಿಗೆ, ಭೂಮಿಗೆ, ಬೆಳಕಿಗೆ ಯಾವುದೇ ಜಾತಿಯಿಲ್ಲ” ಎಂದರು.

“ಮನುಷ್ಯ ಸೋಲುವುದು ಕಲಿತಾಗ ಮಾತ್ರ ಗೆಲ್ಲಲು ಸಾಧ್ಯ. ಕ್ರೀಡೆಯಲ್ಲಿ ಮನುಷ್ಯನ ಗಾತ್ರ ಮುಖ್ಯವಲ್ಲ, ಹೃದಯವಂತಿಕೆ ಮುಖ್ಯ. ಕೋಣಗಳ ಮನಸ್ಸನ್ನು ಗೆದ್ದರೆ ಮಾತ್ರ ಸ್ಪರ್ಧಿ ಕಂಬಳ ಗೆಲ್ಲಲು ಸಾಧ್ಯ. ಕಂಬಳಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಬದ್ದ. ಕಂಬಳಕ್ಕೆ ಯಾವುದೇ ಜಾತಿ,‌ಧರ್ಮವಿಲ್ಲ ಇಲ್ಲಿರುವುದು ಧಾರ್ಮಿಕ ಆಚರಣೆ, ಕ್ರೀಡೆ ಹಾಗೂ ಸಂಸ್ಕೃತಿ” ಎಂದು ಹೇಳಿದರು.

“ಕಳೆದ ವರ್ಷ ಶಾಸಕರಾದ ಅಶೋಕ್ ರೈ ಅವರು ಬೆಂಗಳೂರು ಕಂಬಳವನ್ನು ಆಯೋಜಿಸಿ ಇತಿಹಾಸ ಸೃಷ್ಟಿಸಿದ್ದರು. ಇನಾಯತ್ ಅಲಿ ಅವರು ಸರ್ವಧರ್ಮಗಳನ್ನು ಸೇರಿಸಿ ಕಂಬಳದಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ” ಎಂದು ಹೇಳಿದರು.

BIG NEWS: Kambala sport to be included in Mysore Dasara festival: DCM D.K. Shivakumar's announcement!
Share. Facebook Twitter LinkedIn WhatsApp Email

Related Posts

Rain Alert : ಕರ್ನಾಟಕಕ್ಕೆ ಮುಂಗಾರು ಪ್ರವೇಶ : ರಾಜ್ಯಾದ್ಯಂತ ಮುಂದಿನ 7 ದಿನ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ.!

1 Min Read

ರಾಜ್ಯದಲ್ಲಿ ಖಾಸಗಿ ಶಾಲೆಗಳ ನೋಂದಣಿಗೆ ಜೂನ್ 30ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2 Mins Read

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಸಮಸ್ಯೆ’ ನಿವಾರಣೆಗೆ ಬರುತ್ತಿದೆ ‘ಸ್ಮಾರ್ಟ್ ಅನ್ನವಾಣಿ’!

2 Mins Read
Recent News

Shocking: ಮಗನನ್ನು ತಲೆಕೆಳಗಾಗಿ ನೇತುಹಾಕಿದ್ದ ಕುಡಿದ ಮತ್ತಿನಲ್ಲಿದ್ದ ತಂದೆ; ಕೋಲಿನಿಂದ ಹೊಡೆದು ಕೊಂದ ಪತ್ನಿ!

Rain Alert : ಕರ್ನಾಟಕಕ್ಕೆ ಮುಂಗಾರು ಪ್ರವೇಶ : ರಾಜ್ಯಾದ್ಯಂತ ಮುಂದಿನ 7 ದಿನ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ.!

​ಭಾರತ-ಅಮೆರಿಕ ವಾಣಿಜ್ಯ ಒಪ್ಪಂದ: ಜುಲೈ ಮಧ್ಯಭಾಗದೊಳಗೆ ಮೊದಲ ಹಂತದ ಒಪ್ಪಂದಕ್ಕೆ ಸಹಿ ಸಾಧ್ಯತೆ

​ಭಾರತ-ರಷ್ಯಾ ಬಾಂಧವ್ಯ: ‘ನಮ್ಮದು ವಿಶ್ವಾಸಾರ್ಹ ಮತ್ತು ಸಹೋದರತ್ವದ ಸಂಬಂಧ’: ವ್ಲಾಡಿಮಿರ್ ಪುಟಿನ್

State News
KARNATAKA

Rain Alert : ಕರ್ನಾಟಕಕ್ಕೆ ಮುಂಗಾರು ಪ್ರವೇಶ : ರಾಜ್ಯಾದ್ಯಂತ ಮುಂದಿನ 7 ದಿನ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಮಾರುತಗಳು ಅಧಿಕೃತವಾಗಿ ಲಗ್ಗೆ ಇಟ್ಟಿದ್ದು, ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಮುಂದಿನ ಒಂದು ವಾರದ…

ರಾಜ್ಯದಲ್ಲಿ ಖಾಸಗಿ ಶಾಲೆಗಳ ನೋಂದಣಿಗೆ ಜೂನ್ 30ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಸಮಸ್ಯೆ’ ನಿವಾರಣೆಗೆ ಬರುತ್ತಿದೆ ‘ಸ್ಮಾರ್ಟ್ ಅನ್ನವಾಣಿ’!

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.