Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM

BIGG NEWS : ‘ತಕ್ಷಣ ಪುಸ್ತಕ ಹಿಂತಿರುಗಿಸಿ’, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ 8ನೇ ತರಗತಿ ಪುಸ್ತಕ ಹಿಂತೆಗೆದುಕೊಂಡ ‘NCERT’

27/02/2026 9:50 PM

ಮಾ.1ರಿಂದ ರೈಲು ಟಿಕೆಟ್’ಗಳಿಂದ ಗ್ಯಾಸ್ ಸಿಲಿಂಡರ್ ಬೆಲೆವರೆಗೆ ಹಲವು ನಿಯಮ ಬದಲಾವಣೆ ; ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ

27/02/2026 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕದಲ್ಲಿ `ಕನ್ನಡವೇ ಸಾರ್ವಭೌಮ’ : ವೈದ್ಯರು ಕನ್ನಡದಲ್ಲೇ ಔಷಧಿ ಚೀಟಿ ಬರೆಯುವ ಕುರಿತು ಸರ್ಕಾರದಿಂದ ಮಹತ್ವದ ತೀರ್ಮಾನ!
KARNATAKA

BIG NEWS : ಕರ್ನಾಟಕದಲ್ಲಿ `ಕನ್ನಡವೇ ಸಾರ್ವಭೌಮ’ : ವೈದ್ಯರು ಕನ್ನಡದಲ್ಲೇ ಔಷಧಿ ಚೀಟಿ ಬರೆಯುವ ಕುರಿತು ಸರ್ಕಾರದಿಂದ ಮಹತ್ವದ ತೀರ್ಮಾನ!

By kannadanewsnow5712/09/2024 11:08 AM

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಯ ವೈದ್ಯರು ಕನ್ನಡದಲ್ಲೇ ರೋಗಿಗಳಿಗೆ ಔಷಧಿ ಚೀಟಿಯನ್ನು ಬರೆಯುವಂತೆ ಆದೇಶಿಸಿ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಪತ್ರದಲ್ಲಿ ಮನವಿ ಮಾಡಿದ್ದರು. ಈ ಪತ್ರಕ್ಕೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಪುರುಷೋತ್ತಮ ಬಿಳಿಮಲೆ ಪತ್ರಕ್ಕೆ ಉತ್ತರಿಸಿರುವ ಸಚಿವ ದಿನೇಶ್ ಗುಂಡೂರಾವ್, ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಬೇಕೆಂದು ತಾವು ಮಾಡಿರುವ ಸಲಹೆ ಅತ್ಯಂತ ಮಹತ್ವಪೂರ್ಣ ವಿಷಯ ಎನಿಸಿತು. ನೂರಾರು ವೈದ್ಯರು ತಮ್ಮ ಮಾತುಗಳಿಂದ ಪ್ರೇರಿತರಾಗಿ ಕನ್ನಡದಲ್ಲಿ ಬರದ ಔಷಧಿ ಚೀಟಿಗಳನ್ನು ತಮ್ಮಲ್ಲಿ ಹಂಚಿಕೊಂಡಿದ್ದಾರೆ ಎನ್ನುವುದು ಸಹ ನಿಜಕ್ಕೂ ಸಂತಸದ ಸಂಗತಿ. ಇಂಗ್ಲಿಷ್ ಭಾಷೆ ಇತರೆ ಭಾಷೆಗಳನ್ನು ಆಪೋಶನ ತೆಗೆದುಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ದೈನಂದಿನ ಜೀವನದಲ್ಲಿ ಕನ್ನಡ ಭಾಷೆ ಉಳಿಯಲು, ಬೆಳೆಯಲು ಇಂತಹ ಕ್ರಮಗಳು ಪೂರಕ ಎನ್ನುವುದು ಸರ್ವವೇದ್ಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸುವ ವಿಚಾರದಲ್ಲಿ ಸಾಕಷ್ಟು ತಾಂತ್ರಿಕ ಸಂಗತಿಗಳು ಮಿಳಿತವಾಗಿದೆ. ವೈದ್ಯರು, ರೋಗಿಗಳು, ಶುಶೂಷಕರು, ಔಷಧಿ ವರ್ತಕರು ಮುಂತಾದ ಹತ್ತು ಹಲವು ಪ್ರಭಾ ಕೇಂದ್ರಗಳಿರುವ ಈ ವ್ಯವಸ್ಥೆಯ ಒಂದು ಕೊಂಡಿ ಸರಿಯಾಗಿ ಕನ್ನಡವನ್ನು ಅರ್ಥೈಸಿಕೊಳ್ಳುವುದರಲ್ಲಿ ಎಡವಿದರೂ ರೋಗಿಗಳ ಜೀವನ್ಮರಣದ ಪ್ರಶ್ನೆಯಾಗುವ ಸಾಧ್ಯತೆಯೂ ಇದೆ. ಜನರ ಆರೋಗ್ಯವನ್ನು ಕಾಯುವ ವೈದ್ಯಕೀಯ ವಿಜ್ಞಾನ ಕ್ಷೇತ್ರ ಅತ್ಯಂತ ವಿಶಾಲ ಮತ್ತು ಸಂಕೀರ್ಣವಾಗಿದ್ದು, ಪ್ರಮುಖ ಬದಲಾವಣೆಗಳ ಮುನ್ನ ಎಲ್ಲ ಭಾಗಿದಾರರುಗಳ ಜೊತೆಗೆ ಪೂರ್ವಸಂವಾದ ಅಗತ್ಯ ಎನ್ನುವುದು ನನ್ನ ಭಾವನೆ. ಇದು ಕೇವಲ ಒಂದು ಆದೇಶದ ಮೂಲಕ ಜಾರಿಗೆ ಬರುವ ವಿಚಾರವಲ್ಲ ಎಂದರು.

ಕನ್ನಡದಲ್ಲಿ ವೈದ್ಯಕೀಯ ವ್ಯವಹಾರದ ಅನುಷ್ಠಾನ ಪೂರ್ವದಲ್ಲಿ ಸಾಧಕ ಬಾಧಕಗಳ ಬಗ್ಗೆ ವಿಸ್ಸತ ಚರ್ಚೆ ಅತ್ಯಗತ್ಯ ಎನ್ನುವುದನ್ನು ತಾವೂ ಒಪ್ಪಿಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ. ಕನ್ನಡದ ಅಸ್ಮಿತೆಯನ್ನು ಸಾರುವುದರಲ್ಲಿ ನಾವು ಹಿಂದಡಿ ಇಡುವುದು ಸಾಧ್ಯವೇ ಇಲ್ಲದಿದ್ದರೂ ವೈದ್ಯಕೀಯ ಕ್ಷೇತ್ರದಲ್ಲಿ ಇದು ಎಷ್ಟರ ಮಟ್ಟಿಗೆ ಸಾಧ್ಯ ಎಂಬುದನ್ನು ಎಲ್ಲರನ್ನೂ ಒಳಗೊಳ್ಳುವ ರೀತಿಯಲ್ಲಿ ಪರಾಮರ್ಶಿಸಲೇಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ಔಚಿತ್ಯಪೂರ್ಣ ಸಲಹೆಯನ್ನು ಮುಖ್ಯಮಂತ್ರಿಗಳ ಅವಗಾಹನೆಗೆ ತಂದು ಆಸಕ್ತರ ಸಹಮತಿಯೊಂದಿಗೆ ಜಾರಿಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಮಗೆ ತಿಳಿಯಬಯಸುತ್ತೇನೆ. ನಮ್ಮ ಸರ್ಕಾರ ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಸನ್ನದವಾಗಿದ್ದು, ಈ ಸಂದರ್ಭದಲ್ಲಿ ಧನಾತ್ಮಕ ನಿಲುವನ್ನೆ ನಿರೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

BIG NEWS : 'Kannada is sovereign' in Karnataka : Important decision by the government about doctors writing prescriptions in Kannada! BIG NEWS : ಕರ್ನಾಟಕದಲ್ಲಿ `ಕನ್ನಡವೇ ಸಾರ್ವಭೌಮ' : ವೈದ್ಯರು ಕನ್ನಡದಲ್ಲೇ ಔಷಧಿ ಚೀಟಿ ಬರೆಯುವ ಕುರಿತು ಸರ್ಕಾರದಿಂದ ಮಹತ್ವದ ತೀರ್ಮಾನ!
Share. Facebook Twitter LinkedIn WhatsApp Email

Related Posts

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

27/02/2026 9:13 PM1 Min Read

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM1 Min Read

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM1 Min Read
Recent News

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM

BIGG NEWS : ‘ತಕ್ಷಣ ಪುಸ್ತಕ ಹಿಂತಿರುಗಿಸಿ’, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ 8ನೇ ತರಗತಿ ಪುಸ್ತಕ ಹಿಂತೆಗೆದುಕೊಂಡ ‘NCERT’

27/02/2026 9:50 PM

ಮಾ.1ರಿಂದ ರೈಲು ಟಿಕೆಟ್’ಗಳಿಂದ ಗ್ಯಾಸ್ ಸಿಲಿಂಡರ್ ಬೆಲೆವರೆಗೆ ಹಲವು ನಿಯಮ ಬದಲಾವಣೆ ; ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ

27/02/2026 9:35 PM

ನಿಮ್ಮ ಹೆಸ್ರಲ್ಲಿ ಬೇರೆ ಯಾರಾದ್ರು ಸಾಲ ಪಡೆದಿರ್ಬೋದು ಅನ್ನೋ ಡೌಟ್ ಇದ್ಯಾ.? ಈಗಲೇ ಈ ರೀತಿ ಚೆಕ್ ಮಾಡಿ!

27/02/2026 9:15 PM
State News
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

By kannadanewsnow0927/02/2026 9:13 PM KARNATAKA 1 Min Read

ಮೈಸೂರು: ಮೈಸೂರು ಮತ್ತು ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಬೈಪಾಸ್ ನಡುವೆ ನಡೆಯುತ್ತಿದ್ದ ರಸ್ತೆ ಕೆಳಸೇತುವೆ (RUB) ಕಾಮಗಾರಿಯ ಹಿನ್ನೆಲೆಯಲ್ಲಿ ಈ…

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.