ನೇಪಾಳ ಪ್ರಸ್ತುತ ಆಳವಾದ ರಾಜಕೀಯ ಮತ್ತು ಸಾಮಾಜಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಗಳು ಮತ್ತು ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧ ಸಾರ್ವಜನಿಕ ಪ್ರತಿಭಟನೆಯ ನಂತರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದರು. ಈ ಪ್ರತಿಭಟನೆಗಳ ಸಮಯದಲ್ಲಿ ಪೊಲೀಸ್ ಕ್ರಮದ ಸಮಯದಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದು, ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.
ಇದೀಗ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.a