ನವದೆಹಲಿ : ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸೆಸ್ ಚಾರ್ಜ್ ನಷ್ಟವಾಗಿದೆ. ಒಂದು ವರ್ಷಕ್ಕೆ ರೂ.8,084 ಕೋಟಿ ಸೆಸ್ ಚಾರ್ಜ್ ನಷ್ಟವಾಗಿದೆ ನ್ಯಾಯಯುತವಾಗಿ ಹಣ ಹಂಚಿ ಅಂತ ಹೇಳಿದ್ದೇವೆ. ರಾಜ್ಯಗಳು ಅಭಿವೃದ್ಧಿ ಆದರೆ ದೇಶದ ಅಭಿವೃದ್ಧಿ ಸಾಧ್ಯ ಆಗುತ್ತೆ ಅಲ್ವಾ? ಕೇರಳಕ್ಕೆ 3,800 ಕೋಟಿ ವಿಶೇಷ ಅನುದಾನ ಬಂದಿದೆ. ಕರ್ನಾಟಕಕ್ಕೆ ಯಾವುದೇ ರೀತಿಯಾದ ರೆವೆನ್ಯೂ ಡಿಪೆನ್ಸೀಸ್ ಹಣ ಬಂದಿಲ್ಲ. ನಮ್ಮ ರಾಜ್ಯಕ್ಕೆ 545 ಕೋಟಿ ವಿಶೇಷ ಅನುದಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದೆಹಲಿಯಲ್ಲಿ ಇಂದು ನಡೆದ 16ನೇ ಹಣಕಾಸು ಆಯೋಗದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2011-2012ರಲ್ಲಿ ಕರ್ನಾಟಕ ರಾಜ್ಯವು ಜಿಡಿಪಿಗೆ ಶೇ 7ರಷ್ಟು ಕೊಡುಗೆ ನೀಡಿದ್ದರೆ, 2024-25 ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟು ಕೊಡುಗೆ ನೀಡುತ್ತಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 5 ರಷ್ಟಿದ್ದೇವೆ. 5 ವಷರ್ಗಳಿಗೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಸಂವಿಧಾನದ ಅನುಚ್ಛೇದ 180 ಪ್ರಕಾರ ತೆರಿಗೆ ಹಂಚಿಕೆಯಾಗಬೇಕೆಂದು ಹೇಳಲಾಗಿದ್ದು ಯಾರಿಗೂ ಅನ್ಯಾಯವಾಗಬಾರದೆಂದು ಸ್ಪಷ್ಟಪಡಿಸಿದೆ ಎಂದರು.
15 ನೇ ಹಣಕಾಸಿನ ಆಯೋಗವು ರಾಜ್ಯಕ್ಕೆ 5495 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಕರ್ನಾಟಕ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಒದಗಿಸಬೇಕೆಂದು ಶಿಫಾರಸ್ಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಈ ಅನುದಾನವನ್ನು ಒದಗಿಸಲು ನಿರಾಕರಿಸಿತು. ಇದಲ್ಲದೇ ಪೆರಿಫೆರಲ್ ರಿಂಗ್ ರಸ್ತೆ ಗೆ 3000 ಕೋಟಿ ಹಾಗೂ ಕೆರೆಗಳ ಅಭಿವೃದ್ಧಿಗೆ 3000 ಕೋಟಿ ನೀಡಬೇಕೆಂದು ಶಿಫಾರಸ್ಸು ಮಾಡಿತ್ತು. ಎರಡೂ ಸೇರಿ 11495 ಕೋಟಿ ರೂ.ಗಳನ್ನು ಒದಗಿಸಬೇಕೆಂದು 15 ನೇ ಹಣಕಾಸಿನ ಆಯೋಗವು ಶಿಫಾರಸ್ಸು ಮಾಡಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ದೆಹಲಿಯಲ್ಲಿ ಇಂದು ನಡೆದ 16ನೇ ಹಣಕಾಸು ಆಯೋಗದ ಸಭೆಯಲ್ಲಿ ಪಾಲ್ಗೊಂಡು, ಆಯೋಗದ ಅಧ್ಯಕ್ಷರಾದ ಡಾ. ಅರವಿಂದ ಪನಗರಿಯ ಅವರೊಂದಿಗೆ ಚರ್ಚಿಸಿದೆ. ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು. pic.twitter.com/UMuOzir3cJ
— Siddaramaiah (@siddaramaiah) June 13, 2025