Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 16 ಬಾರಿ ಮಚ್ಚಿನಿಂದ ಕೊಚ್ಚಿ, ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟ ಹಂತಕ : ಬೆಚ್ಚಿಬಿದ್ದ ಬೆಳಗಾವಿ ಜನತೆ!

03/02/2026 12:21 PM

BREAKING: ‘ನಿಯಮ ಪಾಲಿಸಿ ಇಲ್ಲವೇ ಭಾರತ ಬಿಟ್ಟು ತೊಲಗಿ’: WhatsAppಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ!

03/02/2026 12:17 PM

BREAKING: ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

03/02/2026 12:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ : CM ಸಿದ್ದರಾಮಯ್ಯ ಮಾಹಿತಿ
KARNATAKA

BIG NEWS : ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ : CM ಸಿದ್ದರಾಮಯ್ಯ ಮಾಹಿತಿ

By kannadanewsnow5722/10/2024 6:27 AM

ಬೆಂಗಳೂರು : ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ. ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ. ನ್ಯಾಷನಲ್‌ ಸ್ಟಾಟಿಸ್ಟಿಕಲ್‌ ಎಸ್ಟಿಮೇಟ್‌ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ದಿ ದರ ಶೇ.13.1 ರಷ್ಟಾಗಿದ್ದು, ಎನ್‌ಎಸ್‌ಸಿ ಕರ್ನಾಟಕದ ಪ್ರಗತಿಯನ್ನು ತಪ್ಪಾಗಿ ಅಂದಾಜಿಸಿರುವುದು ಸ್ಪಷ್ಟವಾಗಿದೆ ಎಂದರು.

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ. ಕರ್ನಾಟಕದ Gross State Value Added (ಜಿಎಸ್‌ವಿಎ) ಅಂದರೆ ಒಟ್ಟು ಆರ್ಥಿಕತೆಯಲ್ಲಿ ಐಟಿ ಮತ್ತು ಹಾರ್ಡ್‌ವೇರ್‌ ವಲಯದ ಪಾಲು ಶೇ.28ರಷ್ಟಿದ್ದು, ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಈ ವಲಯ ಜಾಗತಿಕವಾಗಿ ಹಿನ್ನಡೆ ಅನುಭವಿಸಿದೆ. ಭಾರತದ ಐಟಿ ವಲಯ 2022ರ ಹಣಕಾಸು ಸಾಲಿನಲ್ಲಿ ಶೇ.15.5 ರಷ್ಟು ಪ್ರಗತಿ ಕಂಡದ್ದು, 2023ರ ಅವಧಿಯಲ್ಲಿ ಶೇ.8ಕ್ಕೆ ಕುಸಿತ ಅನುಭವಿಸಿದೆ. ಆದರೆ ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ ಎಂದು ತಿಳಿಸಿದರು.

2024-25ನೇ ಹಣಕಾಸು ಸಾಲಿಗೆ ಎನ್‌ಎಸ್ಸಿ ಕರ್ನಾಟಕ ರಾಜ್ಯಕ್ಕೆ ಶೇ.9.4 ಜಿಎಸ್‌ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇ.10.5ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಆದರೆ ಹಣಕಾಸು ಸಚಿವಾಲಯ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಗಮನದಲ್ಲಿರಿಸಿ ಈ ಅವಧಿಯಲ್ಲಿ ಕರ್ನಾಟಕದ ಜಿಎಸ್‌ಡಿಪಿ ದರವನ್ನು ಶೇ.14ರಷ್ಟು ಅಂದಾಜಿಸಿದೆ. 2024ರ ಸೆಪ್ಟಂಬರ್‌ ಅವಧಿಯಲ್ಲಿ ಕರ್ನಾಟಕ ವರ್ಷದಿಂದ ವರ್ಷಕ್ಕೆ ಜಿಎಸ್‌ಟಿ ಸಂಗ್ರಹದಲ್ಲಿ ಶೇ.10ರಷ್ಟು ಹಾಗೂ ಮುದ್ರಾಂಕ ಶುಲ್ಕ ಸಂಗ್ರಹದಲ್ಲಿ ಶೇ.24ರಷ್ಟು ಹೆಚ್ಚಳ ದಾಖಲಿಸಿದ್ದು, ಉತ್ತಮ ಆರ್ಥಿಕತೆಯನ್ನು ತೋರಿಸುತ್ತಿದೆ ಎಂದರು

ಕರ್ನಾಟಕದ ತಲಾ ಜಿಎಸ್‌ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ. ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿಪಡಿಸಿವೆ. ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಪ್ರಗತಿಯನ್ನು ಒಂದುಗೂಡಿಸುವ ಕರ್ನಾಟಕದ ಆರ್ಥಿಕ ಮಾದರಿಯ ಯಶಸ್ಸನ್ನು ಇದು ತೋರಿಸುತ್ತದೆ ಎಂದು ಹೇಳಿದ್ದಾರೆ.

ಐಟಿ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಸಾಮರ್ಥ್ಯವನ್ನು ಹೊಂದಿರುವುದು ದೇಶದ ಡಿಜಿಟಲ್‌ ಮತ್ತು ಆರ್ಥಿಕ ರಂಗದಲ್ಲಿ ಪ್ರಮುಖ ಪಾತ್ರ ವಹಿಸಲು ಕಾರಣವಾಗಿದೆ ಎಂದು ತಿಳಿಸಿದರು.

BIG NEWS : ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ : CM ಸಿದ್ದರಾಮಯ್ಯ ಮಾಹಿತಿ BIG NEWS: Karnataka has progressed more than the country's average: CM Siddaramaiah's information
Share. Facebook Twitter LinkedIn WhatsApp Email

Related Posts

BREAKING : 16 ಬಾರಿ ಮಚ್ಚಿನಿಂದ ಕೊಚ್ಚಿ, ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟ ಹಂತಕ : ಬೆಚ್ಚಿಬಿದ್ದ ಬೆಳಗಾವಿ ಜನತೆ!

03/02/2026 12:21 PM1 Min Read

BREAKING: ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

03/02/2026 12:11 PM1 Min Read

ರಾಯಚೂರಲ್ಲಿ ವಿದ್ಯುತ್ ಶಾಕ್ ನಿಂದ 5 ನೇ ತರಗತಿ ವಿದ್ಯಾರ್ಥಿನಿ ಸಾವು ಕೇಸ್ : ಮುಖ್ಯಶಿಕ್ಷಕ ಸಸ್ಪೆಂಡ್

03/02/2026 11:58 AM1 Min Read
Recent News

BREAKING : 16 ಬಾರಿ ಮಚ್ಚಿನಿಂದ ಕೊಚ್ಚಿ, ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟ ಹಂತಕ : ಬೆಚ್ಚಿಬಿದ್ದ ಬೆಳಗಾವಿ ಜನತೆ!

03/02/2026 12:21 PM

BREAKING: ‘ನಿಯಮ ಪಾಲಿಸಿ ಇಲ್ಲವೇ ಭಾರತ ಬಿಟ್ಟು ತೊಲಗಿ’: WhatsAppಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ!

03/02/2026 12:17 PM

BREAKING: ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

03/02/2026 12:11 PM

ನಕ್ಷತ್ರಲೋಕಕ್ಕೆ ಲಗ್ಗೆ ಇಟ್ಟ ‘ರೋಬೋ’ ಜ್ಞಾನ: ಸ್ಪೇಸ್‌ಎಕ್ಸ್ ಜೊತೆ xAI ವಿಲೀನ!

03/02/2026 12:00 PM
State News
KARNATAKA

BREAKING : 16 ಬಾರಿ ಮಚ್ಚಿನಿಂದ ಕೊಚ್ಚಿ, ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟ ಹಂತಕ : ಬೆಚ್ಚಿಬಿದ್ದ ಬೆಳಗಾವಿ ಜನತೆ!

By kannadanewsnow0503/02/2026 12:21 PM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು ವ್ಯಕ್ತಿಯನ್ನು ಕೊಂದು ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ…

BREAKING: ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

03/02/2026 12:11 PM

ರಾಯಚೂರಲ್ಲಿ ವಿದ್ಯುತ್ ಶಾಕ್ ನಿಂದ 5 ನೇ ತರಗತಿ ವಿದ್ಯಾರ್ಥಿನಿ ಸಾವು ಕೇಸ್ : ಮುಖ್ಯಶಿಕ್ಷಕ ಸಸ್ಪೆಂಡ್

03/02/2026 11:58 AM

ಉದ್ಯೋಗ ವಾರ್ತೆ : ಶೀಘ್ರ 2 ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿ: ಸಚಿವ ಸುಧಾಕರ್

03/02/2026 11:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.