ಬೆಂಗಳೂರು : 2024ರ ಖಾರೀಫ್ ಹಾಗೂ 2023-24ನೇ ಸಾಲಿನ ರಬಿ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿರುವ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ಅಗ್ರ 3 ಸ್ಥಾನದಲ್ಲಿರುವ ದೇಶದ ಮೂರು ಜಿಲ್ಲೆಗಳ ಪೈಕಿ ರಾಜ್ಯದ ಹಾವೇರಿ ಮತ್ತು ಕೊಪ್ಪಳ ಸ್ಥಾನ ಪಡೆದಿರುವುದು ವೈಯಕ್ತಿಕವಾಗಿ ಸಂತಸವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಈ ಪ್ರಶಸ್ತಿಯನ್ನು ನಮ್ಮೆಲ್ಲ ಕೃಷಿ ಅಧಿಕಾರಿಗಳು ಹಾಗೂ ನಾಡಿನ ಅನ್ನದಾತರಿಗೆ ಅರ್ಪಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.