ಬೆಂಗಳೂರು: ರಾಜ್ಯದಲ್ಲಿ ಹೊಸವರ್ಷ 2025 ನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಗಿದ್ದು, ಈ ನಡುವೆ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ ಎಂದು ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಮಾಹಿತಿ ನೀಡಿದೆ.
ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಬಿ ಗೋವಿಂದರಾಜು ರಾಜ್ಯದಲ್ಲಿ ಮದ್ಯ ಮಾರಾಟದ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 28ರ ಶನಿವಾರ 408.53 ಕೋಟಿ ರೂಪಾಯಿ ಮದ್ಯ ಮಾರಾಟವಾಗಿದೆ. ಡಿಸೆಂಬರ್ 27ರಂದು ರಜೆ ಘೋಷಣೆ ಮಾಡಿದ್ದರಿಂದ ಮದ್ಯ ಖರೀದಿ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಡಿ. 28ರಂದು 6,22,062 ಕೇಸ್ ವಿಸ್ಕಿ ಮತ್ತು ಇತರ ಸ್ಪಿರಿಟ್ ಖರೀದಿ ಮಾಡಲಾಗಿದೆ. 4,04,998 ಕೇಸ್ ಬಿಯರ್ ಸೇರಿದಂತೆ 10,27,060 ಕೇಸ್ ಮದ್ಯ ಮಾರಾಟ ಆಗಿದೆ. ಇದರಲ್ಲಿ 80.58 ಕೋಟಿ ಮೊತ್ತದ ಬಿಯರ್ ಇದ್ದರೆ, 327,50 ಕೋಟಿ ಮೌಲ್ಯದ ಸ್ಪಿರಿಟ್ಸ್ ಮಾರಾಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.