Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಶಕ್ತಿ ಯೋಜನೆ ಅಡಿಯಲ್ಲಿ ಸ್ತ್ರೀಯರಿಗೆ ಸ್ಮಾರ್ಟ್ ಕಾರ್ಡ್ ಫ್ರೀ ಪುರುಷರಿಗೆ ಶುಲ್ಕ : ಸಚಿವ ಭೈರತಿ ಸುರೇಶ್

BIG NEWS : ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ `AI’ ತಂತ್ರಜ್ಞಾನದ ಹೊಸ ಹೆಜ್ಜೆ

BIG NEWS : ನೀಟ್ ಮರು-ಪರೀಕ್ಷೆಗೂ ಮುನ್ನವೇ, ರಾಜಸ್ತಾನದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಸಾವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ `AI’ ತಂತ್ರಜ್ಞಾನದ ಹೊಸ ಹೆಜ್ಜೆ
KARNATAKA

BIG NEWS : ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ `AI’ ತಂತ್ರಜ್ಞಾನದ ಹೊಸ ಹೆಜ್ಜೆ

By kannadanewsnow57

ಬೆಂಗಳೂರು : ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ.  

ಮುಖ್ಯಮಂತ್ರಿಗಳಾದ  ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ 100% ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದರು.

ಈ ಹಿಂದೆ ಜಾರಿಯಲ್ಲಿದ್ದ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಉದ್ಯೋಗಿಗಳು ಕೇವಲ ಡಿಜಿಟಲ್ ಸಹಿ ಮಾಡಿ ಕಚೇರಿಯಿಂದ ಗೈರಾಗುವ ಸಾಧ್ಯತೆಗಳಿದ್ದವು. ಈ ದೋಷವನ್ನು ನಿವಾರಿಸಲು, ಉದ್ಯೋಗಿಗಳ ಭೌತಿಕ ಉಪಸ್ಥಿತಿ ಮತ್ತು ಕಚೇರಿಯ ಭೌಗೋಳಿಕ ಸ್ಥಳವನ್ನು (Geographical Location) ನಿಖರವಾಗಿ ಪತ್ತೆಹಚ್ಚುವ ಈ ಹೊಸ ವ್ಯವಸ್ಥೆಯನ್ನು ರೂಪಿಸಲಾಗಿದೆ.

ಸಂಪೂರ್ಣ “ಮೇಡ್-ಇನ್-ಕರ್ನಾಟಕ” ಆವಿಷ್ಕಾರ

ಯಾವುದೇ ಬಾಹ್ಯ ಖಾಸಗಿ ತಂತ್ರಜ್ಞಾನ ಸಂಸ್ಥೆಗಳ ನೆರವಿಲ್ಲದೆ, ಸಂಪೂರ್ಣವಾಗಿ ಸರ್ಕಾರದ ಪರಿಸರ ವ್ಯವಸ್ಥೆಯಲ್ಲೇ “ಕರ್ತವ್ಯ” ಸಾಫ್ಟ್‌ವೇರ್ ಅನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ) ಉಸ್ತುವಾರಿಯಲ್ಲಿ, ಸೆಂಟರ್ ಫಾರ್ ಇ-ಗವರ್ನೆನ್ಸ್ (CeG) ಮತ್ತು ಕರ್ನಾಟಕ ಎಐ ಸೆಲ್ (Karnataka AI Cell) ಜಂಟಿಯಾಗಿ ಇದನ್ನು ಸಿದ್ಧಪಡಿಸಿವೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ವೆಂಡರ್ ವೆಚ್ಚ ಉಳಿತಾಯವಾಗಿದ್ದು, ದತ್ತಾಂಶ ಸುರಕ್ಷತೆ ಮತ್ತು ಸ್ವಾಯತ್ತತೆ ಹೆಚ್ಚಾಗಿದೆ. ಕರ್ನಾಟಕದ ಈ ಯಶಸ್ವಿ ಮಾದರಿಯನ್ನು ದೇಶದ ಇತರೆ ರಾಜ್ಯಗಳೂ ಅಳವಡಿಸಿಕೊಳ್ಳಬಹುದಾಗಿದೆ.

ತಂತ್ರಜ್ಞಾನದ ಪ್ರಮುಖ ವೈಶಿಷ್ಟ್ಯಗಳು :

ಕೃತಕ ಬುದ್ಧಿಮತ್ತೆ (AI) ಆಧಾರಿತ ಮುಖ ಗುರುತಿಸುವಿಕೆ – ವಂಚನೆಯ ಹಾಜರಾತಿಯನ್ನು ತಡೆಯಲು ಲೈವ್‌ನೆಸ್ ಡಿಟೆಕ್ಷನ್ (Liveness Detection) ತಂತ್ರಜ್ಞಾನದೊಂದಿಗೆ ಎಐ ಫೇಶಿಯಲ್ ರೆಕಗ್ನಿಷನ್ ಬಳಸಲಾಗಿದೆ.

ಜಿಯೋಫೆನ್ಸಿಂಗ್ (Geofencing) – ಜಿಐಎಸ್ (GIS) ತಂತ್ರಜ್ಞಾನದ ಮೂಲಕ ಉದ್ಯೋಗಿ ತನ್ನ ಕಚೇರಿಯ ನಿಗದಿತ ಪರಿಧಿಯೊಳಗೆ ಇದ್ದಾಗ ಮಾತ್ರ ಹಾಜರಾತಿ ದಾಖಲಿಸಲು ಸಾಧ್ಯವಾಗುತ್ತದೆ.

ಸಂಯೋಜಿತ ಡೇಟಾಬೇಸ್ – ಇದನ್ನು ಆಧಾರ್ ಇ-ಕೆವೈಸಿ (e-KYC) ಮತ್ತು ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ಯೊಂದಿಗೆ ಸಂಯೋಜಿಸಲಾಗಿದೆ.

ಮೊಬೈಲ್ ಆಪ್ ಮತ್ತು ರಜೆ ನಿರ್ವಹಣೆ –  ಆಂಡ್ರಾಯ್ಡ್ ಮತ್ತು ಐಒಎಸ್ ಆಪ್‌ಗಳ ಮೂಲಕ ಹಾಜರಾತಿ, ರಜೆ ಮತ್ತು ಅಧಿಕೃತ ಹೊರಗಿನ ಕೆಲಸದ (OOD) ವಿವರಗಳನ್ನು ದಾಖಲಿಸುವ ಸೌಲಭ್ಯವಿದೆ.

ಇಲಾಖೆಗಳಲ್ಲಿ ದಾಖಲೆ ವೇಗದ ಅನುಷ್ಠಾನ

ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ಆದೇಶದ ಬೆನ್ನಲ್ಲೇ ಈ ತಂತ್ರಜ್ಞಾನವು ಇಲಾಖೆಗಳಲ್ಲಿ ಅತ್ಯಂತ ವೇಗವಾಗಿ ಅನುಷ್ಠಾನಗೊಳ್ಳುತ್ತಿದೆ.

ಕಳೆದ ವಾರ ಅಂದಾಜು 2,46,000 ರಷ್ಟಿದ್ದ ಒಟ್ಟು ನೋಂದಾಯಿತ ಉದ್ಯೋಗಿಗಳ ಸಂಖ್ಯೆ ಪ್ರಸ್ತುತ ವಾರದಲ್ಲಿ 3,01,034 ಕ್ಕೆ ಏರಿಕೆಯಾಗಿದೆ. ಇದು ಕೇವಲ ಒಂದೇ ವಾರದಲ್ಲಿ ಶೇಕಡಾ 25% ಕ್ಕಿಂತಲೂ ಹೆಚ್ಚು (55,000ಕ್ಕೂ ಅಧಿಕ ಹೊಸ ಸೇರ್ಪಡೆ) ಬೆಳವಣಿಗೆಯಾಗಿದೆ. ಇದೇ ಅವಧಿಯಲ್ಲಿ, ಆ್ಯಪ್ ಮೂಲಕ ಪ್ರತಿದಿನ ದಾಖಲಾಗುವ ದೈನಂದಿನ ಹಾಜರಾತಿ ಸಂಖ್ಯೆಯು ಸಹ 1,85,308 ರಿಂದ 2,32,612 ಕ್ಕೆ ಜಿಗಿದಿದ್ದು, ಸಕ್ರಿಯ ಬಳಕೆಯಲ್ಲಿ ಶೇಕಡಾ 25% ರಷ್ಟು ಭಾರಿ ಏರಿಕೆ ದಾಖಲಾಗಿದೆ.

ಪ್ರಸ್ತುತ 42 ಇಲಾಖೆಗಳ 4,78,522 ನೌಕರರನ್ನು ಈ ವ್ಯವಸ್ಥೆಗೆ ಒಳಪಡಿಸಲಾಗಿದ್ದು, ಈ ಪೈಕಿ 3.01 ಲಕ್ಷಕ್ಕೂ  ಹೆಚ್ಚು ಉದ್ಯೋಗಿಗಳು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ. ಕೇವಲ ಒಂದೇ ವಾರದಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಶೇಕಡಾ 25 ರಷ್ಟು ಅಭೂತಪೂರ್ವ ಪ್ರಗತಿ ಕಂಡುಬಂದಿದೆ.

ಶಾಲಾ ಶಿಕ್ಷಣ ಇಲಾಖೆ: ಒಟ್ಟು 1,76,055 ಉದ್ಯೋಗಿಗಳಲ್ಲಿ ಈಗಾಗಲೇ 1,68,252 ನೌಕರರು ನೋಂದಾಯಿಸಿಕೊಂಡಿದ್ದು, 1,41,800ಕ್ಕೂ ಹೆಚ್ಚು ದೈನಂದಿನ ಚೆಕ್-ಇನ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ: 66,969 ನೋಂದಣಿ ಹಾಗೂ 54,400ಕ್ಕೂ ಹೆಚ್ಚು ದೈನಂದಿನ ಹಾಜರಾತಿಯೊಂದಿಗೆ ಎರಡನೇ ಸ್ಥಾನದಲ್ಲಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾದ ನಂತರ, ಶಾಲಾ ಶಿಕ್ಷಣ ಇಲಾಖೆಯ ಸಿಬ್ಬಂದಿ ಇದನ್ನು ಸಕ್ರಿಯವಾಗಿ ಬಳಸುತ್ತಿದ್ದಾರೆ. ಇನ್ನುಳಿದ ಹಲವು ಇಲಾಖೆಗಳು ಈಗಾಗಲೇ ಶೇಕಡಾ 90 ಕ್ಕಿಂತ ಹೆಚ್ಚು ನೋಂದಣಿ ಮೈಲಿಗಲ್ಲನ್ನು ದಾಟಿವೆ.

ಇತರ ಇಲಾಖೆಗಳು: ಪದವಿ ಪೂರ್ವ ಮಂಡಳಿ, ಆಯುಷ್ (AYUSH), ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮತ್ತು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಗಳು ಈಗಾಗಲೇ 90% ಕ್ಕಿಂತ ಹೆಚ್ಚು ನೋಂದಣಿ ಗುರಿಯನ್ನು ಯಶಸ್ವಿಯಾಗಿ ತಲುಪಿವೆ.

“ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದಲ್ಲಿ ಡಿಸಿ/ಸಿಇಒಗಳು ದಿನನಿತ್ಯ ಈ ವ್ಯವಸ್ಥೆಯ ಡ್ಯಾಶ್‌ಬೋರ್ಡ್ ಅನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಕಚೇರಿ ಅವಧಿಯಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಸಿಗದಿರುವ ಬಗ್ಗೆ ನಾಗರಿಕರು ನೀಡುವ ಪ್ರತಿಕ್ರಿಯೆ (Feedback) ಈ ಸುಶಾಸನದ ಗುರಿಯನ್ನು ತಲುಪಲು ಪ್ರಮುಖ ಪಾತ್ರ ವಹಿಸಲಿದೆ.”

ಸಾರ್ವಜನಿಕರಿಗೆ ಸಿಗಲಿದೆ ಉತ್ತಮ ಸೇವೆ:

ಸಾರ್ವಜನಿಕ ಸೇವೆಗೆ ಹೊಸ ವೇಗ

ಮೊಬೈಲ್ ಮೂಲಕವೇ ಹಾಜರಾತಿ ದಾಖಲಿಸುವ ಸೌಲಭ್ಯ ಇರುವುದರಿಂದ ಕಚೇರಿಗಳ ಮುಂಭಾಗದಲ್ಲಿ ಬಯೋಮೆಟ್ರಿಕ್‌ಗಾಗಿ ಸಾಲಿನಲ್ಲಿ ನಿಲ್ಲುವುದು ತಪ್ಪಿದೆ ಎಂದು ಸರ್ಕಾರಿ ನೌಕರರು ಸಂತಸ ವ್ಯಕ್ತಪಡಿಸಿದ್ದಾರೆ.

“ಕರ್ತವ್ಯ ಆ್ಯಪ್ ಪ್ರತಿಯೊಬ್ಬ ಸರ್ಕಾರಿ ನೌಕರನೂ ತನ್ನ ಜವಾಬ್ದಾರಿಯನ್ನು ಹೆಮ್ಮೆ, ಶಿಸ್ತು ಮತ್ತು ನಿರ್ದಿಷ್ಟ ಉದ್ದೇಶದೊಂದಿಗೆ ನಿರ್ವಹಿಸಲು ಶಕ್ತಿ ತುಂಬುತ್ತಿದೆ”.

ಅಂತಿಮವಾಗಿ, ಕಚೇರಿಗಳಲ್ಲಿ ಅಧಿಕಾರಿಗಳ ಭೌತಿಕ ಲಭ್ಯತೆ ಮತ್ತು ವಿಶ್ವಾಸಾರ್ಹತೆಯನ್ನು ಖಾತರಿಪಡಿಸುವ ಮೂಲಕ ಸಾರ್ವಜನಿಕರಿಗೆ ಸಿಗುವ ಸೇವೆಗಳು ಇನ್ನು ಮುಂದೆ ಹೆಚ್ಚು ಸುಲಭ ಹಾಗೂ ತಡೆರಹಿತವಾಗಲಿವೆ. ಈ ಮೂಲಕ ಕರ್ನಾಟಕವು ಡಿಜಿಟಲ್ ಆಡಳಿತ ಮತ್ತು ನಾಗರಿಕ ಕೇಂದ್ರಿತ ಸುಧಾರಣೆಯಲ್ಲಿ ದೇಶದಲ್ಲೇ ಮುಂಚೂಣಿ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: 'Kartavya' revolution in Karnataka: A new step in indigenous `AI' technology
Share. Facebook Twitter LinkedIn WhatsApp Email

Related Posts

BIG NEWS : ಶಕ್ತಿ ಯೋಜನೆ ಅಡಿಯಲ್ಲಿ ಸ್ತ್ರೀಯರಿಗೆ ಸ್ಮಾರ್ಟ್ ಕಾರ್ಡ್ ಫ್ರೀ ಪುರುಷರಿಗೆ ಶುಲ್ಕ : ಸಚಿವ ಭೈರತಿ ಸುರೇಶ್

2 Mins Read

SHOCKING : ರಾಜ್ಯದಲ್ಲಿ ಘೋರ ಘಟನೆ : ಅಕ್ಕ-ತಂಗಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್ ಪೋಕ್ಸೋ ಕೇಸ್ ದಾಖಲು!

2 Mins Read

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್.!

1 Min Read
Recent News

BIG NEWS : ಶಕ್ತಿ ಯೋಜನೆ ಅಡಿಯಲ್ಲಿ ಸ್ತ್ರೀಯರಿಗೆ ಸ್ಮಾರ್ಟ್ ಕಾರ್ಡ್ ಫ್ರೀ ಪುರುಷರಿಗೆ ಶುಲ್ಕ : ಸಚಿವ ಭೈರತಿ ಸುರೇಶ್

BIG NEWS : ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ `AI’ ತಂತ್ರಜ್ಞಾನದ ಹೊಸ ಹೆಜ್ಜೆ

BIG NEWS : ನೀಟ್ ಮರು-ಪರೀಕ್ಷೆಗೂ ಮುನ್ನವೇ, ರಾಜಸ್ತಾನದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಸಾವು!

SHOCKING : ರಾಜ್ಯದಲ್ಲಿ ಘೋರ ಘಟನೆ : ಅಕ್ಕ-ತಂಗಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್ ಪೋಕ್ಸೋ ಕೇಸ್ ದಾಖಲು!

State News
KARNATAKA

BIG NEWS : ಶಕ್ತಿ ಯೋಜನೆ ಅಡಿಯಲ್ಲಿ ಸ್ತ್ರೀಯರಿಗೆ ಸ್ಮಾರ್ಟ್ ಕಾರ್ಡ್ ಫ್ರೀ ಪುರುಷರಿಗೆ ಶುಲ್ಕ : ಸಚಿವ ಭೈರತಿ ಸುರೇಶ್

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ, ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಯಡಿ ಸ್ಮಾರ್ಟ್ ಕಾರ್ಡ್…

BIG NEWS : ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ `AI’ ತಂತ್ರಜ್ಞಾನದ ಹೊಸ ಹೆಜ್ಜೆ

SHOCKING : ರಾಜ್ಯದಲ್ಲಿ ಘೋರ ಘಟನೆ : ಅಕ್ಕ-ತಂಗಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್ ಪೋಕ್ಸೋ ಕೇಸ್ ದಾಖಲು!

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.