ನವದೆಹಲಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆಎನ್ ರಾಜಣ್ಣ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಮಾಡಿದ್ದು ಕುತೂಹಕ್ಕೆ ಕಾರಣವಾಗಿತ್ತು . ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾಯಕತ್ವದ ಗೊಂದಲದ ನಿವಾರಣೆಯ ಬಗ್ಗೆ ಖರ್ಗೆ ಭರವಸೆ ನೀಡಿದ್ದಾರೆ. ಖರ್ಗೆ ಭೇಟಿ ಮಾಡಿ ರಾಜ್ಯದ ಬಗ್ಗೆ ಚರ್ಚೆ ಮಾಡಿದ್ದೇವೆ ಹಾಗಾಗಿ ಗೊಂದಲ ಬೇಗನೆ ನಿವಾರಣೆ ಮಾಡಿ ಅಂತ ಚರ್ಚಿಸಿದ್ದೇವೆ. ಆದಷ್ಟು ಬೇಗ ಗೊಂದಲ ನಿವಾರಣೆ ಮಾಡುತ್ತೇವೆ ಅಂದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು.








