ಮೈಸೂರು: ಎಚ್.ಡಿ ರೇವಣ್ಣ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ. ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದೆ ಎನ್ನಲಾಗಿದ್ದು, ಸದ್ಯ ಪ್ರಕರಣ ಸಂಬಂಧ ವಣ್ಣ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಈ ನಡುವೆಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಬೆಳಗ್ಗೆ 11:30ಕ್ಕೆ ಈ ಅರ್ಜಿಯ ವಿಚಾರಣೆ ನಡೆಸಲಿದೆ. ಪೆನ್‍ಡ್ರೈವ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ನಿಗೆ ಈಗ ಇನ್ನೊಂದು ಸಂಕಷ್ಟ ಎದುರಾಗಿದೆ.