ಬೆಂಗಳೂರು : ಕೆಪಿಎಸ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜ್ಯೋತಿ ಸ್ಪಷ್ಟಿಕರಣ ಕೊಟ್ಟಿದ್ದಾರೆ. ಪರೀಕ್ಷೆಯನ್ನು ಅತಂತ್ರ ಪಾರದರ್ಶಕವಾಗಿ ನಡೆಸಿದ್ದು ಫಲಿತಾಂಶವನ್ನು ಸಹ ಬಿಡುಗಡೆ ಮಾಡಲಾಗಿದೆ ಆಧಾರದ ಇಲ್ಲದೆ ಭ್ರಷ್ಟಾಚಾರ ಆರೋಪ ಮಾಡಲು ಸರಿಯಲ್ಲ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಕೇಳಿದ್ದಾರೆ ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದೇವೆ.
ಫಲಿತಾಂಶದ ಕುರಿತು ಹಲವಾರು ಜನ ತುಂಬಾ ತಪ್ಪುಗಳು ನಡೆದಿದೆ ಎಂದು ಹೇಳುತ್ತಿದ್ದಾರೆ. ಈ ಕುರಿತು ಮುಖ್ಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ಯಾವುದೇ ತಪ್ಪುಗಳು ಇದರಲ್ಲಿ ನಡೆದಿಲ್ಲ. ಮಾಹಿತಿಯನ್ನು ಅರ್ಥ ಮಾಡಿಕೊಳ್ಳುವರಲ್ಲಿ ಸ್ವಲ್ಪ ಗೊಂದಲಕ್ಕೆ ಈಡಾಗಿದ್ದಾರೆ. ಯಾವುದೇ ಮಾಹಿತಿ ಇದ್ದರೂ ಕೂಡ ಅವರು ನಮ್ಮನ್ನು ಕೇಳಬಹುದು ನಾವು ಅದನ್ನು ಪರಿಶೀಲನೆ ಮಾಡಿ ಅವರಿಗೆ ಉತ್ತರ ಕೊಡುತ್ತೇವೆ.
ಒಂದೇ ಕೊಠಡಿಯಲ್ಲಿ ಇರುವವರು 15, 16 ಜನ ಆಯ್ಕೆ ಮಾಡಿದ್ದಾರೆ ಎನ್ನುವುದು ಅದನ್ನು ಕೂಡ ನಾವು ಆಂತರಿಕವಾಗಿ ಪರಿಶೀಲನೆ ಮಾಡುತ್ತಿದ್ದಾರೆ. ಒಂದೇ ಪರೀಕ್ಷೆ ಕೇಂದ್ರದಿಂದ 15 ಜನ ಆಯ್ಕೆಯಾಗಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು. ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟಿಸಿ ಸಂದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು. 1:3 ಅನುಪಾತ ರಲ್ಲಿ ವಿದ್ಯಾರ್ಥಿಗಳು ವ್ಯಕ್ತಿತ್ವ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ. ಒಂದೇ ಕುಟುಂಬದ ಹಲವರು ಆಯ್ಕೆಯಾಗಿರುವ ಆರೋಪ ಕೇಳಿ ಬಂದಿದೆ. ಕೆಪಿಎಸ್ಸಿ ವಿರುದ್ಧ ಪರೀಕ್ಷ ಬರೆದ ಹಲವು ಅಭ್ಯರ್ಥಿಗಳು ಆರೋಪಿಸಿದ್ದಾರೆ.
ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳಿಗೆ ಅರ್ಜಿ ಕರೆಯಲಾಗಿತ್ತು. 2024 ಫೆಬ್ರವರಿ 26ರಂದು ಕೆ ಎ ಎಸ್ ಅಧಿಸೂಚನೆ ಹೊರಡಿಸಿತ್ತು. 2024 ಆಗಸ್ಟ್ 27 ರಂದು ಪೂರ್ವಭಾವಿ ಪರೀಕ್ಷೆ ನಡೆದಿತ್ತು. 2024 ಡಿಸೆಂಬರ್ 29ರಂದು ಮರು ಪೂರ್ವಭಾವಿ ಪರೀಕ್ಷೆ ನಡೆದಿದ್ದು, 2025 ಮೇ 3, 5, 7, 9 ರಂದು ಕೆಎಎಸ್ ಮುಖ್ಯ ಪರೀಕ್ಷೆ ನಡೆದಿತ್ತು. ಬೆಂಗಳೂರು ಮತ್ತು ಧಾರವಾಡದ ಜಿಲ್ಲಾ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಗಿತ್ತು. 2026 ಮಾರ್ಚ್ ಎರಡರಲ್ಲೂ ಕೆಎಎಸ್ ಮುಖ್ಯ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿತ್ತು. ಇದರಲ್ಲಿ ಒಂದೇ ಪರೀಕ್ಷಾ ಕೇಂದ್ರದಿಂದ 15 ಒಂದು ಆಯ್ಕೆಯಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.








