ಬೆಳಗಾವಿ : ರಸ್ತೆ ಮೇಲೆ ನಾಯಿ ಅಡ್ಡ ಬಂದಿದ್ದಕ್ಕೆ ಅದನ್ನು ತಪ್ಪಿಸಲು ಹೋಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿದ್ದು, ಈ ಒಂದು ಅಪಘಾತದಲ್ಲಿ ಅವರ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಈ ಕುರಿತು ಆಸ್ಪತ್ರೆಯ ವೈದ್ಯ ರವಿ ಪಾಟೀಲ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನುಮೂಳೆ ಮುರಿದಿದೆ ಎಂದು ಹೇಳಿಕೆ ನೀಡಿದ್ದಾರೆ.
ಬೆಳಗಾವಿಯ ಹಿರಿಯ ಆಸ್ಪತ್ರೆಯ ವೈದ್ಯರದಂತಹ ಡಾ. ರವಿ ಪಾಟೀಲ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಎರಡು ದಿನಗಳ ಬಳಿಕ ಸಚಿವೆ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿ ಪರಿಗಣಿಸಿ ಡಿಸ್ಚಾರ್ಜ್ ಮಾಡಲಾಗುತ್ತದೆ. ಸಚಿವೆ ಹೆಬ್ಬಾಳ್ಕರ್ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಬೇಕಾಗುತ್ತದೆ ಚನ್ನರಾಜಟಿಹೊಳಿ ತಲೆಗೆ ಪೆಟ್ಟಾಗಿದ್ದು ಹೆಚ್ಚಿನ ಗಾಯಗಳಾಗಿಲ್ಲ ಎಂದು ಬೆಳಗಾವಿಯ ವಿಜಯ ರವಿ ಪಾಟೀಲ್ ಕುರಿತು ಹೇಳಿಕೆ ನೀಡಿದರು.
ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೆಬ್ಬಾಳ್ಕರ್ ಅವರು ಇಂದು ಬೆಳಿಗ್ಗೆ 6 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಹಾಗೂ ಗನ್ ಮ್ಯಾನ್ ಹಾಗೂ ಹೆಬ್ಬಾಳ್ಕರ್ ಅವರ ಕಾರುಚಾಲಕ ಆಸ್ಪತ್ರೆಗೆ ದಾಖಲಾಗಿದ್ದಾರೆ.ಎಲ್ಲರಿಗೂ ಕೂಡ ಚಿಕಿತ್ಸೆ ನೀಡಿದ್ದೇವೆ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.ಎಲ್ಲರಿಗೂ ಪೇನ್ ಕಿಲ್ಲರ್ ಇಂಜೆಕ್ಷನ್ ಎಲ್ಲರಿಗೂ ಸಿಟಿ ಸ್ಕ್ಯಾನ್ ಮಾಡಿದ್ದೇವೆ. ಹೆಬ್ಬಾಳ್ಕರ್ ಅವರಿಗೆ ಯಾವುದೇ ಮೂಳೆಮುರಿತವಾಗಿದೆ. ಬೆನ್ನಿನ L-1 ಮೂಳೆ ಮುರಿತವಾಗಿದೆ. ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುತ್ತೇವೆ.
ಘಟನೆ ಹಿನ್ನೆಲೆ?
ರಸ್ತೆ ಮೇಲೆ ನಾಯಿ ಅಡ್ಡ ಬಂದಿದ್ದಕ್ಕೆ ಅದನ್ನು ತಪ್ಪಿಸಲು ಹೋಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿದ್ದು, ಈ ಒಂದು ಅಪಘಾತದಲ್ಲಿ ಅವರ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾಹಿತಿ ಪಡೆದುಕೊಂಡಿದ್ದಾರೆ.
ಹೌದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಕಾರು ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಹೆಬ್ಬಾಳ್ಕರ್ ಹಾಗೂ, ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ.
ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ.ರವಿ ಪಟೀಲ್ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆ ನೀಡುತ್ತಿದ್ದಾರೆ.ಆಸ್ಪತ್ರೆಗೆ ಬೆಳಗಾವಿ ಎಸ್ ಪಿ ಆಗಮಿಸಿದ್ದು, ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಹೆಬ್ಬಾಳ್ಕರ್ ತಾಯಿ ಹಾಗೂ ಸೋದರಿ ಕೂಡ ಆಸ್ಪತ್ರೆಗೆ ಆಗಮಿಸಿದ್ದು, ಆರೋಗ್ಯ ವಿಚಾರಿಸಿದ್ದಾರೆ.