ಬೆಳಗಾವಿ : ಕಳೆದ ಸಂಕ್ರಾಂತಿ ಹಬ್ಬದಂದು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುವ ಸಂದರ್ಭದಲ್ಲಿ ಬೈಲಹೊಂಗಲದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿತ್ತು. ಈ ವೇಳೆ ಅವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು.
ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ತಕ್ಷಣ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಎಂದು ದಾಖಲಿಸಲಾಗಿತ್ತು ಈ ವೇಳೆ ವೈದ್ಯರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನುಮೂಳೆ ಮುರಿತವಾಗಿದ್ದು ಕುತ್ತಿಗೆ ಬಳಿ ಗಾಯವಾಗಿದೆ ಎಂದು ತಿಳಿಸಿದರು. ಇದೀಗ ಸತತ 13 ದಿನಗಳ ನಂತರ ಶಸ್ತ್ರಚಿಕಿತ್ಸೆ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವೇಳೆ ಆಸ್ಪತ್ರೆಯ ವೈದ್ಯರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಧನ್ಯವಾದ ತಿಳಿಸಿದ್ದಾರೆ.
ಪ್ರಿಯ ವೈದ್ಯರೇ, ಕಳೆದ 13 ದಿನಗಳು ಇಲ್ಲಿ ನನಗೆ ಆಸ್ಪತ್ರೆಗಿಂತ ಮನೆಯಂತೆ ಭಾಸವಾಯಿತು, ನೀವು ನನ್ನ ಕುಟುಂಬಕ್ಕಿಂತ ಕಡಿಮೆಯಿಲ್ಲದಂತೆ ನನ್ನನ್ನು ನೋಡಿಕೊಂಡಿದ್ದೀರಿ. ನನ್ನ ಕಷ್ಟದ ಸಮಯದಲ್ಲಿ, ನೀವು ನನ್ನ ಪಕ್ಕದಲ್ಲಿ ನಿಂತು, ಪ್ರಬಲವಾದ ಬೆಂಬಲ ಮತ್ತು ಕಾಳಜಿಯನ್ನು ತೋರಿಸಿದ್ದೀರಿ. ನಿಮ್ಮ ದಯೆ, ತಾಳ್ಮೆ ಮತ್ತು ಸಮರ್ಪಣೆ ಹೃದಯಸ್ಪರ್ಶಿಯಾಗಿತ್ತು.
ನೀವು ಹಗಲಿರುಳು ನನ್ನೊಂದಿಗೆ ಇದ್ದು ನಾನು ಸದೃಢವಾಗಲು ಕಾರಣರಾಗಿದ್ದೀರಿ ಮತ್ತು ಧೈರ್ಯ ಕಳೆದುಕೊಳ್ಳದಂತೆ ಪ್ರೇರೇಪಿಸಿದ್ದೀರಿ. ನಿಮ್ಮ ಪ್ರೋತ್ಸಾಹ ನನಗೆ ಶೀಘ್ರ ಗುಣಮುಖನಾಗಲು ಶಕ್ತಿಯನ್ನು ನೀಡಿತು ಮತ್ತು ನಿಮ್ಮ ಸಹಾನುಭೂತಿ ಮತ್ತು ಪರಿಣತಿಗೆ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೇನೆ.ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿ ಯಶ ಸಿಗಲಿ, ನಿಮಗೆ ಅತ್ಯಂತ ಉಜ್ವಲ ಭವಿಷ್ಯ ಮತ್ತು ಯಶಸ್ಸನ್ನು ಹಾರೈಸುತ್ತೇನೆ. ಹೃತ್ಪೂರ್ವಕ ಕೃತಜ್ಞತೆಯೊಂದಿಗೆ, ಲಕ್ಷ್ಮೀ ಹೆಬ್ಬಾಳಕರ್ ಎಂದು ಅವರು ವೈದ್ಯರಿಗೆ ಅಭಿನಂದನೆಗಳನ್ನು ತಿಳಿಸಿದರು.