Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದಯೋನ್ಮುಖ ಕಲಾವಿದರಿಗಾಗಿ ‘ಪರಮ್ ವಿಹಾರ’: ಫೆ.22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

19/02/2026 12:46 PM

ALERT : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ !

19/02/2026 12:44 PM

BREAKING : ಜನಸಾಮಾನ್ಯರಿಗೆ ಬಿಗ್ ಶಾಕ್ : `ಅಡುಗೆ ಎಣ್ಣೆ, ಸೋಪ್’ ಸೇರಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ !

19/02/2026 12:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ‘ಮಲೆಯಾಳಂ’ ಕಲಿಕೆ ಕಡ್ಡಾಯ : ಕೇರಳ ಸರ್ಕಾರದ ನಡೆಗೆ CM ಸಿದ್ದರಾಮಯ್ಯ ಆಕ್ರೋಶ.!
KARNATAKA

BIG NEWS : ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ‘ಮಲೆಯಾಳಂ’ ಕಲಿಕೆ ಕಡ್ಡಾಯ : ಕೇರಳ ಸರ್ಕಾರದ ನಡೆಗೆ CM ಸಿದ್ದರಾಮಯ್ಯ ಆಕ್ರೋಶ.!

By kannadanewsnow5709/01/2026 12:28 PM

ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾಧಿಸುತ್ತೇನೆ.

ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ.

ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ.

ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ಆಗ್ರಹಿಸುತ್ತೇನೆ.

ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆ ಅಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿರುತ್ತದೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳು ಸುಲಭದಲ್ಲಿ ವಿಷಯಗಳನ್ನು ಗ್ರಹಿಸುತ್ತಾರೆ ಎನ್ನುವದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅವರ ಮೇಲೆ ಅನ್ಯಭಾಷೆಯನ್ನು ಹೇರುವುದರಿಂದ ಅವರ ಕಲಿಕಾ ಸಾಮರ್ಥ್ಯವನ್ನು ಕುಂದಿಸುವುದು ಮಾತ್ರವಲ್ಲ, ಒಂದು ಸ್ವತಂತ್ರಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟ ಹಾಗಾಗುತ್ತದೆ.

ಕಾಸರಗೋಡಿನ ಜನ ಹಲವು ತಲೆಮಾರುಗಳಿಂದ ಕನ್ನಡ ಮಾಧ್ಯಮದಲ್ಲಿ ಓದಿದ್ದಾರೆ, ನಿತ್ಯದ ಬದುಕಿನಲ್ಲಿ ಕನ್ನಡವನ್ನು ನಿರಂತರವಾಗಿ ಬಳಸುತ್ತಾ ಬಂದಿದ್ದಾರೆ. ಕಾಸರಗೋಡು ಜಿಲ್ಲೆಯ ಶೇಕಡಾ 70ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಮತ್ತು ಕನ್ನಡ ಮಾಧ್ಯಮದಲ್ಲಿಯೇ ಕಲಿಯುವುದನ್ನು ಬಯಸುತ್ತಾರೆ ಎಂಬುದು ಅಲ್ಲಿನ ಕನ್ನಡಿಗರ ಒಕ್ಕೊರಲ ಅಭಿಪ್ರಾಯವಾಗಿದೆ. ಯಾವುದೇ ಒಂದು ಭಾಷೆ ಮತ್ತೊಂದು ಭಾಷೆಯ ವಿರುದ್ಧವಾಗಿ ಇರುವುದಿಲ್ಲ. ಭಾರತ ಬಹುಭಾಷೆ, ಬಹುಸಂಸ್ಕೃತಿ ಮತ್ತು ಬಹುಧರ್ಮದ ತೊಟ್ಟಿಲಾಗಿದೆ. ಈ ಬಹುತ್ವದ ವಾತಾವರಣಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಅಪಾಯಕಾರಿಯಾಗಿದೆ.

ಭಾಷೆಯೂ ಸೇರಿದಂತೆ ಅಲ್ಪಸಂಖ್ಯಾತರ ಹಿತರಕ್ಷಣೆಯ ವಿಚಾರದಲ್ಲಿ ನಾವೆಲ್ಲರೂ ಗೌರವಿಸುವ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಸಂವಿಧಾನದ 29 ಮತ್ತು 30ನೇ ಪರಿಚ‍್ಛೇದಗಳು ದೇಶದ ಯಾವುದೇ ಭಾಗದಲ್ಲಿ ವಾಸಿಸುತ್ತಿರುವವರಿಗೆ ತಮ್ಮ ಭಾಷೆ, ಲಿಪಿ ಮತ್ತು ಸಂಸ್ಕೃತಿ ರಕ್ಷಿಸಿಕೊಳ್ಳುವ ಹಕ್ಕನ್ನು ನೀಡಿದೆ. ಅವರಿಗೆ ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ನಡೆಸುವ ಹಕ್ಕನ್ನೂ ನೀಡುತ್ತದೆ. ಸಂವಿಧಾನದ 350 (ಎ) ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 350(ಬಿ)  ಅಲ್ಪಸಂಖ್ಯಾತರ ರಕ್ಷಣೆಯ ಖಾತರಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಭಾಷಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು.

ಕರ್ನಾಟಕದಲ್ಲಿ ನಾವು ಕನ್ನಡ ಭಾಷೆಯನ್ನು ಪೊರೆಯುವ ಕೆಲಸ ಮಾಡಿದ ಹಾಗೆ, ಕೇರಳ ರಾಜ್ಯದಲ್ಲಿ ಮಲೆಯಾಳಿ ಭಾಷೆಯನ್ನು ಬೆಳೆಸುವ ಮತ್ತು ಉಳಿಸುವ ಸರ್ವ ಸ್ವಾತಂತ್ರ್ಯ ಅಲ್ಲಿನ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಒಂದು ಭಾಷೆಯ ಮೇಲೆ ಇನ್ನೊಂದು ಭಾಷೆಯನ್ನು ಹೇರುವ ಪ್ರಯತ್ನ ಸಲ್ಲದು.

ಕೇರಳ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸಲು ಹೊರಟರೆ ಕನ್ನಡಿಗರು ಇದನ್ನು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ. ಕಾಸರಗೋಡಿನ ಕನ್ನಡಿಗರ ಜೊತೆಯಲ್ಲಿ ನಿಂತು ಅವರ ಭಾಷಾ ಸ್ವಾತಂತ್ರ್ಯದ ರಕ್ಷಣೆಗೆ ಸರ್ವರೀತಿಯ ಬೆಂಬಲವನ್ನು ನೀಡಲಿದ್ದಾರೆ.

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾಧಿಸುತ್ತೇನೆ.

ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ… pic.twitter.com/4LNY2Dk10D

— Siddaramaiah (@siddaramaiah) January 8, 2026

BIG NEWS: Learning Malayalam as the first language is mandatory in Kannada medium schools: CM Siddaramaiah is outraged by the Kerala government's move!
Share. Facebook Twitter LinkedIn WhatsApp Email

Related Posts

ಉದಯೋನ್ಮುಖ ಕಲಾವಿದರಿಗಾಗಿ ‘ಪರಮ್ ವಿಹಾರ’: ಫೆ.22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

19/02/2026 12:46 PM1 Min Read

ALERT : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ !

19/02/2026 12:44 PM2 Mins Read

ALERT : ನಿಮ್ಮ `ಮೊಬೈಲ್’ ಸ್ಪೋಟಗೊಳ್ಳಲು ಈ 5 ತಪ್ಪುಗಳೇ ಕಾರಣ !

19/02/2026 12:30 PM2 Mins Read
Recent News

ಉದಯೋನ್ಮುಖ ಕಲಾವಿದರಿಗಾಗಿ ‘ಪರಮ್ ವಿಹಾರ’: ಫೆ.22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

19/02/2026 12:46 PM

ALERT : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ !

19/02/2026 12:44 PM

BREAKING : ಜನಸಾಮಾನ್ಯರಿಗೆ ಬಿಗ್ ಶಾಕ್ : `ಅಡುಗೆ ಎಣ್ಣೆ, ಸೋಪ್’ ಸೇರಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ !

19/02/2026 12:39 PM

ಬುರ್ಖಾ ಧರಿಸಿ ಪತಿಯ ಮೇಲೆ ಕಣ್ಣಿಟ್ಟಿದ್ದ ಪತ್ನಿ: ಪ್ರೇಯಸಿಯೊಂದಿಗೆ ಸಿಕ್ಕಿಬಿದ್ದ ಶಿಕ್ಷಕನಿಗೆ ಧರ್ಮದೇಟು | Watch video

19/02/2026 12:39 PM
State News
KARNATAKA

ಉದಯೋನ್ಮುಖ ಕಲಾವಿದರಿಗಾಗಿ ‘ಪರಮ್ ವಿಹಾರ’: ಫೆ.22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

By kannadanewsnow0919/02/2026 12:46 PM KARNATAKA 1 Min Read

ಬೆಂಗಳೂರು: ವಿಜ್ಞಾನ, ಇತಿಹಾಸ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡುತ್ತಿರುವ ‘ಪರಮ್ ಫೌಂಡೇಶನ್’, ಯುವ ಪ್ರತಿಭೆಗಳನ್ನು…

ALERT : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ !

19/02/2026 12:44 PM

ALERT : ನಿಮ್ಮ `ಮೊಬೈಲ್’ ಸ್ಪೋಟಗೊಳ್ಳಲು ಈ 5 ತಪ್ಪುಗಳೇ ಕಾರಣ !

19/02/2026 12:30 PM

BREAKING : ನಿರ್ಮಾಪಕ ಸಾರಾ ಗೋವಿಂದು ಫೋನ್ ನಂಬರ್ ಹ್ಯಾಕ್ : 45 ಸಾವಿರ ಹಣಕ್ಕೆ ಬೇಡಿಕೆ!

19/02/2026 12:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.