ಬೆಂಗಳೂರು : ಲೋಕಸಭಾ ಚುನಾವಣೆ 2024 ರ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದ್ದು, ಬಿಗಿ ಭದ್ರತೆಯ ನಡುವೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.
ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಮಾಜಿ ಮುಖ್ಯಮಂತ್ರಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಇನ್ನೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿ. ಶ್ರೀರಾಮಲು ಹೀನಾಯವಾಗಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಮ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಆಗಿದ್ದು, ಪ್ರಜ್ವಲ್ ರೇವಣ್ಣ ಹೀನಾಯವಾಗಿ ಸೋಲನುಭವಿಸಿದ್ದಾರೆ. ಶ್ರೇಯಸ್ ಪಟೇಲ್ ಹಾಸನ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.