ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿತ್ತು. ಇದೀಗ ಈ ಒಂದು ಆದೇಶದ ಪ್ರತಿ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಅವರ ಕೈಗೆ ತಲುಪಿದೆ. ಹಾಗಾಗಿ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗುತ್ತಾ ಎಂದು ಕಾದು ನೋಡಬೇಕಾಗಿದೆ.
ಕೋರ್ಟ್ ನಿಂದ ಆದೇಶ ಪ್ರತಿಯನ್ನು ಲೋಕಾಯುಕ್ತ ಎಸ್ ಪಿ ಉದೇಶ ಇದೀಗ ಪಡೆದುಕೊಂಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಂದು ಆದೇಶದ ಪ್ರತಿ ಪಡೆದಿದ್ದಾರೆ.ಹಾಗಾಗಿ ಶೀಘ್ರವೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುತ್ತಾ ಎಂದು ಕಾದು ನೋಡಬೇಕು.