ರಾಮನಗರ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು ಆಡಳಿತ ನಡೆಸುತ್ತಿದೆ. ಆದರೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೆಯು ಇದೀಗ ಸಂಚಲನ ಮೂಡಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದುಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ. ಮಾಗಡಿ ತಾಲೂಕು ಕುದೂರು ಹೋಬಳಿಯ ಶ್ರೀಗಿರಿಪುರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಅವರು ಹೇಳಿದರು.
ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಪಕ್ಷಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂಬ ಅರ್ಥ ಬರುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ಮಾಡಿದ್ದೇನೆ ಎಂದು ಅವರು ಹೇಳಿದರು.
ನಿಮ್ಮ ಮತ ಅಕ್ಷತೆ ಕಾಳಿಗಾ ಅಥವಾ ಐದು ಗ್ಯಾರಂಟಿ ಯೋಜನೆಗಳಿಗಾ ಎಂಬ ಕುರಿತು ಮತದಾರರು ಯೋಜನೆ ಮಾಡಬೇಕು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಒಳಿತಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನಸಾಮಾನ್ಯರು ಇವುಗಳ ಪ್ರಯೋಜನ ಪಡೆಯುತ್ತಿದ್ದಾರೆ. ರಾಜ್ಯದ ಜನರ ಬಗ್ಗೆ ಕಾಳಜಿ ಹೊಂದಿರುವ ಪಕ್ಷ ಕಾಂಗ್ರೆಸ್. ಹೀಗಾಗಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಡಿ. ಕೆ.ಸುರೇಶ್ ಅವರಿಗೆ ಮತ ನೀಡಬೇಕು. ಹಾಗೊಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದರು.