ಬೆಳಗಾವಿ : ನಿನ್ನೆ ಬೆಳಗಾವಿಯಲ್ಲಿ ಕನ್ನಡ ಮಾತಾಡು ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಮಹಾರಾಷ್ಟ್ರದ ಹಲವು ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ತನ್ನ ಬಸ್ ಗಳ ಸಂಚಾರವನ್ನು ಇದೀಗ ಸ್ಥಗಿತಗೊಳಿಸಿದೆ.
ಹೌದು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿದೆ. ಸಾರಿಗೆ ಬಸ್ ಸಂಚಾರ ಬಂದ್ ಮಾಡಿ ಮಹಾರಾಷ್ಟ್ರ ಸರ್ಕಾರ. ಬೆಳಗಾವಿ ಗಡಿಯವರೆಗೆ ಮಾತ್ರ ಮಹಾರಾಷ್ಟ್ರದ ಸಾರಿಗೆ ಬಸ್ ಗಳು ಇದೀಗ ಬರುತ್ತವೆ. ಕರ್ನಾಟಕದಿಂದ ಎಂದಿನಂತೆ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ನಡೆಸುತ್ತಿವೆ. ಮಹಾರಾಷ್ಟ್ರದ ವಿವಿಧ ಕಡೆಗೆ ಕರ್ನಾಟಕದ ಸಾರಿಗೆ ಬಸ್ಗಳು ಸಂಚರಿಸುತ್ತಿವೆ.
ಪ್ರಕರಣ ಹಿನ್ನೆಲೆ?
ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಗೆ ಮರಾಠಿ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಹದೇವ್ ಹಲ್ಲೆಗೊಳಗಾದ ಕಂಡೆಕ್ಟರ್ ಎಂದು ತಿಳಿದುಬಂದಿದೆ. ಬೆಳಗಾವಿಯಲ್ಲಿ ಮತ್ತೆ ಮರಾಠಾ ಯುವಕರು ಗೂಂಡಾಗಿರಿ ಮೆರೆದಿದ್ದಾರೆ.
ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಯುವತಿಯೊಬ್ಬಳು ಮರಾಠಿಯಲ್ಲಿ ಟಿಕೆಟ್ ಕೇಳಿದ್ದಳು. ಕಂಡಕ್ಟರ್ ಮಹಾದೇವ್ ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ. ಅಷ್ಟಕ್ಕೇ ರೊಚ್ಚಿಗೆದ್ದ ಬಸ್ ನಲ್ಲಿದ್ದ ಮರಾಠಿ ಯುವಕರ ಗುಂಪು ಬಸ್ ನಿಲ್ಲಿಸಿ ಕಂಡಕ್ಟರ್ ಕೊರಳಪಟ್ಟಿ ಹಿಡಿದು ಮನಬಂದಂತೆ ಥಳಿಸಿದ್ದಾರೆ.
ಸುಳೇಬಾವಿ-ಬಾಳೆಕುಂದ್ರಿ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಗಂಭೀರವಾಗಿ ಹಲ್ಲೆಗೊಳಗಾಗಿರುವ ಕಂದಕ್ಟರ್ ಮಹಾದೇವ್ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.