ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ ಸಂಜೆ ಖರ್ಗೆ ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಆಗಮಿಸುತ್ತಿದ್ದಂತೆ ಹಿರಿಯ ವೈದ್ಯರು, ಹಲವು ಪರೀಕ್ಷೆಗಳನ್ನು ನಡೆಸಿದರು.
ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಏನೋ ಇದೇ ವಿಚಾರವಾಗಿ ಸಚಿವ ಪ್ರಿಯಾಂಕ ಖರ್ಗೆ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದು, ಹೃದಯ ನಿಯಂತ್ರಕ (pacemaker) ಅಳವಡಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಹೃದಯದ ಅಸಹಜ ಲಯವನ್ನು ಸರಿಪಡಿಸುವ (pacemaker) ಅಳವಡಿಸಲು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಕೆ ಕಾಣುತ್ತಿದ್ದಾರೆ. ಎಲ್ಲರ ಹಾರೈಕೆ ಹಾಗೂ ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.
ಪೇಸ್‌ಮೇಕರ್ ಒಂದು ಸಣ್ಣ ಎಲೆಕ್ಟ್ರಾನಿಕ್ ಸಾಧನವಾಗಿದ್ದು, ಶಸ್ತ್ರ ಚಿಕಿತ್ಸೆ ಮೂಲಕ ಅದನ್ನು ಅಳವಡಿಸಲಾಗುತ್ತದೆ. ಇದು ನಿಯಮಿತ ಹೃದಯ ಬಡಿತವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಹೃದಯ ಬಡಿತ ತುಂಬಾ ನಿಧಾನವಾಗಿದ್ದಾಗ ಅಥವಾ ಅನಿಯಮಿತವಾಗಿದ್ದಾಗ, ಈ ಸಾಧನ ಹೃದಯಕ್ಕೆ ವಿದ್ಯುತ್ ಸಂಕೇತಗಳನ್ನು ಕಳುಹಿಸುತ್ತವೆ. ಪೇಸ್‌ಮೇಕರ್ ಹೃದಯ ಬಡಿತವನ್ನು ನಿಯಂತ್ರಿಸುತ್ತದೆ. ಇದರಿಂದಾಗಿ ಅದು ಸರಿಯಾದ ಲಯದಲ್ಲಿ ಬಡಿಯಲು ಸಹಾಯ ಮಾಡುತ್ತದೆ.
Sri Kharge was advised pacemaker to be implanted and is admitted to the hospital for the planned procedure. He is stable and doing well.
Grateful to all of you for your concern and wishes.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 1, 2025