ಮೈಸೂರು : ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಾಡಾನೆ ದಾಳಿ ಪ್ರಕರಣಗಳು ಆಗಾಗ ನಡೆಯುತ್ತಿರುತ್ತವೆ ಕಾಡುಪ್ರಾಣಿ ಹಾಗೂ ಮಾನವ ಸಂಘರ್ಷದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಮೈಸೂರಲ್ಲಿ ಕಾಡಾನೆ ದಾಳಿಗೆ ಅವಿನಾಶ್ ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ.
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಗದೆಹಳ್ಳ ಗ್ರಾಮದಲ್ಲಿ ಆನೆ ದಾಳಿಗೆ ಅವಿನಾಶ್ ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ.ಅವಿನಾಶ್ ಎಂದಿನಂತೆ ಜಮೀನಿಗೆ ತೆರಳಿದ ವೇಳೆ ದಾಳಿ ಮಾಡಿದೆ.ಆನೆ ದಾಳಿಯಿಂದ ಅವಿನಾಶ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.