ಮಂಡ್ಯ: ಮಂಡ್ಯದಲ್ಲಿ ಅದ್ದೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆ ಬಿದ್ದಿದೆ. ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಣಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 5 ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ.
1. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನು ರಾಜ್ಯ ಸಮಿತಿ ಉಪಾಧ್ಯಕ್ಷರನ್ನಾಗಿಸಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ.
2 .ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ನಿಯಮ ಸಮಗ್ರವಾಗಿ ಕೂಡಲೇ ಜಾರಿಯಾಗಬೇಕು.
3.ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ಕೋರ್ಟ್ ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸರ್ಕಾರ ಸಮರ್ಥವಾಗಿ ಎದುರಿಸಬೇಕು. ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸಬೇಕು.
4.ಎಲ್ಲಾ ಕನ್ನಡ ಶಾಲೆಗಳಿಗೆ ಕಟ್ಟಡ, ಆಟದ ಮೈದಾನ ಸೇರಿ ಇತರೆ ಮೂಲ ಸೌಕರ್ಯ ಒದಗಿಸಬೇಕು. ಶಿಕ್ಷಕರ ನೇಮಕಾತಿಗೆ ತ್ವರಿತ ಕ್ರಮ ಕೈಗೊಳ್ಳಬೇಕು.
5.ಕನ್ನಡೇತರ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡಬೇಕು. ರಾಷ್ಟ್ರಕವಿಯನ್ನು ಅತಿ ಶೀಘ್ರದಲ್ಲೇ ಘೋಷಿಸಬೇಕು