ಮಂಡ್ಯದಲ್ಲಿ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಅನಾಥಶ್ರಮದಲ್ಲಿ ಪುಡ್ ಪಾಯಿಸನ್ ನಿಂದಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 6ನೇ ತರಗತಿ ವಿದ್ಯಾರ್ಥಿ ಕೇರ್ಲಾಂಗ್ (13) ಮೃತ ಬಾಲಕ ಎಂದು ತಿಳಿದುಬಂದಿದೆ.
ಇದೀಗ ಈ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದ ಪೊಲೀಸರು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ ಕಾಗೆಪುರದಲ್ಲಿ ಈ ಒಂದು ಘಟನೆ ನಡೆದಿತ್ತು. ಗೋಕುಲ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಲಂಕೇಶ್, ಊಟ ಸಪ್ಲೈ ಮಾಡುತ್ತಿದ್ದ ಹೋಟೆಲ್ ಮಾಲೀಕ ಸಿದ್ದರಾಜು, ಮದನ್ ಕಲ್ಯಾಣ ಮಂಟಪದ ಮ್ಯಾನೇಜರ್ ಕೃಷ್ಣ ಎನ್ನುವವರನ್ನು ವಶಕ್ಕೆ ಪಡೆಯಲಾಗಿದೆ ಮೂರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮಳವಳ್ಳಿಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.