ಬೆಂಗಳೂರು : ರಾಜ್ಯದಲ್ಲಿ ವರ್ಣಾರ್ಭಟದಿಂದ ಇಂದು ಘೋರವಾದ ದುರಂತ ಸಂಭವಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮೇಲೆ ಗುಡ್ಡ ಕುಸಿದು ದುರಂತ ಸಂಭವಿಸಿದೆ. ಈ ಒಂದು ದುರಂತದಲ್ಲಿ ಕಾಂತಪ್ಪ ಪೂಜಾರಿ ಅವರ ಪತ್ನಿ ಹಾಗೂ ಅವರಿಬ್ಬರ ಮೊಮ್ಮಕ್ಕಳು ಸಾವನಪ್ಪಿದ್ದಾರೆ.
ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ, ಮಂಗಳೂರಿನ ಉಳ್ಳಾಲದಲ್ಲಿ ಗುಡ್ಡ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಕ್ಷಣ ಮಂಗಳೂರಿಗೆ ತೆರಳಲು ಸಚಿವ ದಿನೇಶ್ ಗುಂಡೂರಾವ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡಿದ್ದಾರೆ.ತಕ್ಷಣ ಜಿಲ್ಲೆಗೆ ತೆರಳಿ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡುರಾವ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.