ಶಿವಮೊಗ್ಗ : ಉಗ್ರರ ಗುಂಡಿನ ದಾಳಿಯಲ್ಲಿ ಬಲಿಯಾದ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರ ಮೃತದೇಹವನ್ನು ನಾಳೆ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಲಿದೆ. ಬಳಿಕ ರಸ್ತೆಯ ಮೂಲಕ ಶಿವಮೊಗ್ಗಕ್ಕೆ ತರಳಾಗುತ್ತೆ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಶಾಸಕ ಚನ್ನಬಸಪ್ಪ ಹೇಳಿಕೆ ನೀಡಿದರು.
ಅಂತಿಮ ದರ್ಶನಕ್ಕೆ ಇಡೀ ಶಿವಮೊಗ್ಗದ ಜನರು ಬರುವ ನಿರೀಕ್ಷೆ ಇದೆ. ವರ್ತಕರ ಎಲ್ಲರು ಅಂಗಡಿ ಮುಂಗಟ್ಟು ಮುಚ್ಚುವ ತೀರ್ಮಾನ ಮಾಡಿದ್ದಾರೆ. ಭಯೋತ್ಪಾದನೆ ಸರ್ವ ನಾಶವಾಗಬೇಕೆಂದು ತೀರ್ಮಾನ ಮಾಡಿದ್ದಾರೆ. ಸ್ವಯಂ ಪ್ರೇರಿತರಾಗಿ ಬಂದ್ ಮಾಡಲು ಜನರು ತೀರ್ಮಾನಿಸಿದ್ದಾರೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು.
ಮನೆಯ ಮುಂದೆ ಧಾರ್ಮಿಕ ವಿಧಿ ವಿಧಾನ ನಡೆಸಿದ ಬಳಿಕ ಮೆರವಣಿಗೆ ಮೂಲಕ ರೋಟರಿ ಚಿತಾಗಾರಕ್ಕೆ ತೆರಳಿ ಅಂತ್ಯಕ್ರಿಯೆ ನೆರವೇರಲಿದೆ. ಮಧ್ಯಾಹ್ನ 12 ಗಂಟೆ ಬಳಿಕ ಮೆರವಣಿಗೆ ಆರಂಭವಾಗಲಿದೆ. ಮಂಜುನಾಥ ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ರಸ್ತೆಯ ಮೂಲಕ ಮೃತದೇಹವನ್ನು ಶಿವಮೊಗ್ಗಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.