ಮುಂಬೈ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 60 ವರ್ಷದ ವ್ಯಕ್ತಿಯನ್ನು ದೋಷಿ ಎಂದು ಘೋಷಿಸಿರುವ ಮುಂಬೈನ ವಿಶೇಷ ನ್ಯಾಯಾಲಯ, ಆರೋಪಿಯ ಲೈಂಗಿಕ ಉದ್ದೇಶವನ್ನು ಊಹಿಸಲು ಇನ್ನೊಬ್ಬ ವ್ಯಕ್ತಿಯ ಸಮ್ಮುಖದಲ್ಲಿ ಹಸ್ತಮೈಥುನ ಮಾಡಿಕೊಳ್ಳುವುದು ಸಾಕು ಎಂದು ಹೇಳಿದೆ.
ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಧೀಶೆ ಪ್ರಿಯಾ ಬಂಕರ್ ಅವರು ಆಗಸ್ಟ್ 29 ರಂದು ಆರೋಪಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದೆ. ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಧೀಶೆ ಪ್ರಿಯಾ ಬಂಕರ್ ಅವರು ಆಗಸ್ಟ್ 29 ರಂದು ಆರೋಪಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದರು.
ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಾಪೀಠ ಹಸ್ತಮೈಥುನವು ಲೈಂಗಿಕ ಕ್ರಿಯೆಯಾಗಿದೆ ಮತ್ತು ಇನ್ನೊಬ್ಬ ವ್ಯಕ್ತಿಯ ಉಪಸ್ಥಿತಿಯಲ್ಲಿ ಮಾಡಿದರೆ, ಆರೋಪಿಯ ಲೈಂಗಿಕ ಉದ್ದೇಶವನ್ನು ಊಹಿಸಲು ಇದು ಸಾಕಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. “ಈ ಘಟನೆಯು ಸಂತ್ರಸ್ಥ ಕುಟುಂಬ ಸದಸ್ಯರ ಮೇಲೆ ಮತ್ತು ಸಮಾಜದ ಮೇಲೆ ತುಂಬಾ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಮನೆ ಮತ್ತು ಹತ್ತಿರದ ಸುತ್ತಮುತ್ತಲಿನ ಪ್ರದೇಶಗಳು ಮಕ್ಕಳಿಗೆ ಸುರಕ್ಷಿತವಲ್ಲ ಮತ್ತು ಇದು ಸಮಾಜದಲ್ಲಿ ಆತಂಕಕಾರಿ ಪರಿಸ್ಥಿತಿಯನ್ನು ಉಂಟುಮಾಡುತ್ತದೆ ಎಂಬ ಭಾವನೆ ಅವರಲ್ಲಿದೆ” ಎಂದು ನ್ಯಾಯಾಧೀಶರು ಹೇಳಿದರು.
BREAKING NEWS : ಮುರುಘಾಶ್ರೀಗಳ ಪ್ರಕರಣ ಕಾನೂನು ಪ್ರಕಾರವೇ ನಡೆಯಲಿದೆ : ಸಿಎಂ ಬಸವರಾಜ ಬೊಮ್ಮಾಯಿ