ಕೆಎನ್ಎನ್ಡಿಜಿಟಲ್ಡೆಸ್ಕ್: ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎನ್ನಲಾಗಿದೆ. ಭ್ರಷ್ಟಾಚಾರಕ್ಕಾಗಿ ಅದರ ಇಬ್ಬರು ಮಾಜಿ ಸಚಿವರಿಗೆ ಶಿಕ್ಷೆ ವಿಧಿಸಿದ ಒಂದು ವಾರದ ನಂತರ ದೇಶದಲ್ಲಿ ಸಂಭಾವ್ಯ ಕ್ಷಿಪ್ರಕ್ರಾಂತಿ ನಡೆಯುತ್ತಿದೆ ಅಂಥ ಹಲವು ಮಾಧ್ಯಮಗಳು ವರದಿ ಮಾಡಿದೆ. ಇದು ರಾಷ್ಟ್ರದ ಇತಿಹಾಸದಲ್ಲಿ ಅತ್ಯಂತ ವಿವಾದಾತ್ಮಕ ನಿರ್ಧಾರವಾಗಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಪೋಸ್ಟ್ಗಳ ಪ್ರಕಾರ ಬೀಜಿಂಗ್ನಲ್ಲಿರುವ ಕ್ಸಿ ಜಿನ್ಪಿಂಗ್ ಅವರ ನಿವಾಸದ ಕಡೆಗೆ ಮಿಲಿಟರಿ ಚಲನೆ ಕಂಡುಬಂದಿದೆ. ಮಿಲಿಟರಿ ವಾಹನಗಳು ಕ್ಸಿ ಅವರ ನಿವಾಸದ ಬಳಿ ಚಲನೆಯನ್ನು ಮಾಡುತ್ತಿರುವುದು ಕಂಡುಬಂದಿದೆ. ಅಂತಹ ಚಲನವಲನಗಳ ಕೆಲವು ವೀಡಿಯೊಗಳು ಸಹ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಆದಾಗ್ಯೂ, ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವನ್ನು ಮಾಡಿಲ್ಲ. ಯಾವುದೇ ನಿರ್ದಿಷ್ಟ ಕಾರಣವನ್ನು ನೀಡದೆ, ದೇಶವು 9,000 ಕ್ಕೂ ಹೆಚ್ಚು ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಕ್ಷಿಪ್ರಕ್ರಾಂತಿ ಬಹುತೇಕ ದೃಢಪಟ್ಟಿದೆ ಎಂದು ಚೀನಾದ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ. ಮಿಲಿಟರಿ ಮುಖ್ಯಸ್ಥ ಜನರಲ್ ಲಿ ಕ್ವಿಯೋಮಿಂಗ್ ಮುಂದಿನ ಅಧ್ಯಕ್ಷರಾಗಲಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ.