ಬೆಂಗಳೂರು : ಇವರಿಗೆ ನಿರುದ್ಯೋಗಿ ಯುವಕರೇ ಟಾರ್ಗೆಟ್ ಆಗಿದ್ದು, ಅವರಿಗೆ ಕೋರ್ಟ್ ನಲ್ಲಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಒಬ್ಬರಿಂದ 20ರಿಂದ 25 ಲಕ್ಷ ಹಣ ಪಿಕಿ ನಂತರ ಆಂಜನೇಯ ಬೆಂಗಳೂರಿನಲ್ಲಿ ಫ್ರಾಡ್ ದಂಪತಿಗಳನ್ನು ಪೊಲೀಸರು ಅರೆಸ್ಟ್ ಮಾಡುವವರಿಗೆ ಯಶಸ್ವಿಯಾಗಿದ್ದಾರೆ.
ಹೌದು ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ನಿರುದ್ಯೋಗಿಗಳು, ಖಾಸಗಿ ಕಂಪನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದವರನ್ನು ಗುರಿಯಾಗಿಸಿಕೊಂಡು ವಂಚನೆಗಿಳಿಯುತ್ತಿದ್ದ ಇವರು, ಅವರಿಗೆ ಕೋರ್ಟ್ನಲ್ಲಿ ಡಿ-ಗ್ರೂಪ್ ಹುದ್ದೆ ಕೊಡಿಸುತ್ತೇವೆ ಎಂದು ನಂಬಿಸುತ್ತಿದ್ದರು. ಇದೇ ರೀತಿ ಒಬ್ಬೊಬ್ಬರಿಂದ 10 ಲಕ್ಷದಿಂದ 25 ಲಕ್ಷ ರೂಪಾಯಿವರೆಗೆ ಹಣ ವಸೂಲಿ ಮಾಡುತ್ತಿದ್ದರು.
ಆರೋಪಿಗಳ ವಿರುದ್ಧ ಬಸವೇಶ್ವರ ನಗರ ಸೇರಿದಂತೆ ಕೆಲವೆಡೆ ಪ್ರಕರಣಗಳು ದಾಖಲಾಗಿದ್ದವು. ಪ್ರಾಥಮಿಕ ತನಿಖೆಯ ಪ್ರಕಾರ, 500ಕ್ಕೂ ಹೆಚ್ಚು ಜನರಿಂದ 25 ಕೋಟಿ ರೂಪಾಯಿಗೂ ಅಧಿಕ ಹಣ ಲೂಟಿ ಮಾಡಿದ್ದಾರೆ ಎನ್ನಲಾಗಿದೆ. 2024ರಲ್ಲೂ ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚಿಸಿ ಜೈಲು ಸೇರಿದ್ದ ದಂಪತಿ, ನಂತರ ಜೈಲಿನಿಂದ ಬಿಡುಗಡೆಯಾದ ಬಳಿಕವೂ ಬುದ್ಧಿ ಕಲಿಯದೇ ಮತ್ತದೇ ಕೃತ್ಯ ಎಸಗಿರುವುದು ಕಂಡುಬಂದಿದೆ. ವಿಚಾರಣೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.








