Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ಎಲ್ಲಾ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಮಗುವಿಗೆ ಸರ್ಕಾರದಿಂದ ‘ಸ್ಪೆಷಲ್ ಗಿಫ್ಟ್’ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ
KARNATAKA

BIG NEWS: ರಾಜ್ಯದ ಎಲ್ಲಾ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಮಗುವಿಗೆ ಸರ್ಕಾರದಿಂದ ‘ಸ್ಪೆಷಲ್ ಗಿಫ್ಟ್’ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

By kannadanewsnow0523/01/2025 7:46 PM

ಬೆಂಗಳೂರು : ಜನವರಿ 24 ರಂದು ರಾಜ್ಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆಯನ್ನ ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಜನಿಸುವ ಎಲ್ಲ ಹೆಣ್ಣು ಮಕ್ಕಳಿಗೆ ವಿಶೇಷ ಉಡುಗೊರೆ ನೀಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ಈ ಬಾರಿಯ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನ ರಾಜ್ಯದಾದ್ಯಂತ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಆಸ್ಪತ್ರೆಗಳಲ್ಲಿ ಪಿಂಕ್ ಲೈಟಿಂಗ್ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ಸ್ಪೆಷಲ್ ಗಿಫ್ಟ್ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. 1000 ರೂ ಬೆಲೆಯ ಮಕ್ಕಳ ಕಿಟ್ಸ್ ಗಳನ್ನ ಜನಿಸಿದ ಹೆಣ್ಣುಮಗುವಿಗೆ ಉಡುಗೊರೆಯಾಗಿ ನೀಡಲು ಆರೋಗ್ಯ ಇಲಾಖೆ ಎಲ್ಲ ಜಿಲ್ಲೆಯ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.‌

ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಗೆ ಶುಭಕೋರಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಬದ್ಧ ಎಂದಿದ್ದಾರೆ. ಹೆಣ್ಣುಮಕ್ಕಳ ಆರೋಗ್ಯ ಕಾಪಾಡುವ ವಿಚಾರದಲ್ಲಿ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಅನಿಮೀಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆ ಹೆಣ್ಣುಮಕ್ಕಳ ರಕ್ತ ಹೀನತೆ ಹೋಗಲಾಡಿಸುವಲ್ಲಿ ಮಹತ್ವದ ಯೋಜನೆಯಾಗಿದೆ. ಶುಚಿ ಯೋಜನೆ, ಜನನಿ ಸುರಕ್ಷಾ ಯೋಜನೆಗಳನ್ನ ಜಾರಿಗೊಳಿಸದೆ. ವಿಶೇಷವಾಗಿ ಹೆಣ್ಣುಭ್ರೂಣ ಹತ್ಯೆಗಳನ್ನ ನಡೆಸುವವರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.

ಸಮಾಜದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಎಲ್ಲಾ ಅಸಮಾನತೆಗಳ ಬಗ್ಗೆ ದಿನಾಚರಣೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಹೆಣ್ಣು ಹುಟ್ಟುವ ಮೊದಲೇ ಎದುರಿಸುವ ಲಿಂಗ ತಾರತಮ್ಯವು ಒಂದು ಪ್ರಚಲಿತ ಸಮಸ್ಯೆಯಾಗಿದೆ. ಇಂದಿಗೂ ಸಹ ಹೆಚ್ಚಿನ ಜನರು ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳನ್ನು ಹೊಂದಬೇಕೆಂದು ಎಂದು ನಂಬುತ್ತಾರೆ. ಇದು ಸರಿಯಲ್ಲ. ಹೆಣ್ಣನ್ನ ಪೂಜ್ಯ ಭಾವನೆಯಿಂದ ನೋಡಬೇಕು. ಲಿಂಗ ಪತ್ತೆ ಮತ್ತು ಗರ್ಭಪಾತ ನಡೆಸುವ ಎಲ್ಲಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮತ್ತು ಹೆಣ್ಣು ಮಗುವಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ PCPNDT ಕಾಯ್ದೆಯನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಮ್ಮ ಶುಭಾಶಯದಲ್ಲಿ ಹೇಳಿದ್ದಾರೆ.

ಹೆಣ್ಣುಭ್ರೂಣ ಹತ್ಯೆ ತಡೆಯಲು ಸರ್ಕಾರವು ಕೈಗೊಂಡಿರುವ ಕ್ರಮಗಳು

* ರಾಜ್ಯದಲ್ಲಿ ಇದುವರೆಗೂ ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್ / ಮಾಲೀಕರು/ ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳು ದಂಡವಿಧಿಸಿ ಖುಲಾಸೆಗೊಂಡಿದ್ದು, 62 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿರುತ್ತದೆ.

* ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್ / ಆಸ್ಪತ್ರೆ/ ವೈದ್ಯರು / ದಲ್ಲಾಳಿಗಳು / ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ರಾಜ್ಯ ಸರ್ಕಾರದಿಂದ 1,00,000 ರೂ. ಬಹುಮಾನ ಘೋಷಿಸಲಾಗಿದೆ.

* ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ಧ ಸಮಿತಿಗಳು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆಗೊಂಡಿರುತ್ತದೆ.

* ರಾಜ್ಯದಿಂದ “ಬಾಲಿಕಾ’ ಆನ್‌ಲೈನ್ ಸಾಪ್ಟ್ವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ.

* ಅಲ್ಪಾ ಸೌಂಡ್ ತಯಾರಕರು, ಮಾರಾಟಗಾರರು, ರಿಪೇರಿ ಮಾಡುವವರನ್ನು ರಾಜ್ಯ ಮಟ್ಟದಲ್ಲಿ ನೋಂದಾಯಿಸಿ, ತ್ರೈಮಾಸಿಕ ವರದಿಯನ್ನು ಪಡೆಯಲಾಗುತ್ತಿದೆ..

* ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದೆ.

* ಗುಪ್ತಕಾರ್ಯಚಾರಣೆಯನ್ನು ಕೈಗೊಳ್ಳುವ ಮೂಲಕ ಹೆಣ್ಣಭ್ರೂಣಹತ್ಯ ನಡೆಸುವವರನ್ನ ಸೆರೆಹಿಡಿದು ಪೊಲೀಸರ ವಶಕ್ಕೆ ನೀಡಲಾಗಿದೆ.

* ಪ್ರತಿ ವರ್ಷ ಜನವರಿ 24 ರಂದು ಜಿಲ್ಲೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಸದರಿ ದಿನದಂದು ಜನನವಾಗಿರುವ ಹೆಣ್ಣು ಮಗುವಿನ ತಾಯಂದಿರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಗುತ್ತಿದೆ‌.

Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.