Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇದು ಐತಿಹಾಸಿಕ ಮೈಲಿಗಲ್ಲು’ : ನೇಪಾಳದಲ್ಲಿ ‘ಬಾಲೇಂದ್ರ ಶಾ’ ಗೆಲುವಿಗೆ ‘ಪ್ರಧಾನಿ ಮೋದಿ’ ಅಭಿನಂದನೆ

07/03/2026 9:03 PM

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

07/03/2026 8:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಾಣಂತಿಯರ ಸಾವು ಕೇಸ್ : `IV ದ್ರಾವಣ’ ಪೂರೈಕೆ ಮಾಡಿರುವ ಕಂಪನಿ ವಿರುದ್ಧ `FIR’ ದಾಖಲಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ.!
KARNATAKA

BIG NEWS : ಬಾಣಂತಿಯರ ಸಾವು ಕೇಸ್ : `IV ದ್ರಾವಣ’ ಪೂರೈಕೆ ಮಾಡಿರುವ ಕಂಪನಿ ವಿರುದ್ಧ `FIR’ ದಾಖಲಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ.!

By kannadanewsnow5705/12/2024 6:41 AM

ಬೆಂಗಳೂರು : ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಐವಿ ದ್ರಾವಣದ 22 ಬ್ಯಾಚ್ ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಕೇಸ್ ದಾಖಲಿಸಿ ಎಂದು ಸೂಚಿಸಿದರು.

ಈ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ರಾಜ್ಯದ ಡ್ರಗ್ ಕಂಟ್ರೋಲ್ ನೀಡಿದ 22 ಬ್ಯಾಚ್ ಗಳ NSQ ವರದಿಯಲ್ಲಿ 13 ಬ್ಯಾಚ್ ಗಳ ವರದಿ ಪ್ರಶ್ನಿಸಿ ಕಂಪನಿಯವರು ಸೆಂಟ್ರಲ್ ಡ್ರಗ್ ಲ್ಯಾಬರೋಟಿರಿ ಮೆಟ್ಟಿಲೇರಿದ್ದಾರೆ. ಅದರಲ್ಲಿ 4 ಬ್ಯಾಚ್ ಗಳು ಗುಣಮಟ್ಟ ಹೊಂದಿವೆ ಎಂದು ಸೆಂಟ್ರಲ್ ಡ್ರಗ್ ಲ್ಯಾಬ್ ವರದಿ ನೀಡಿದೆ. ಅಲ್ಲದೇ 13 ಬ್ಯಾಚ್ ಗಳ ಬಗ್ಗೆ ಸೆಂಟ್ರಲ್ ಡ್ರಗ್ ಲ್ಯಾಬ್ ನಿಂದ ವರದಿ ಬರಬೇಕಿದೆ ಎಂದು ಸ್ಪಷ್ಟನೆ ನೀಡಿದರು. ಉಳಿದ 9 ಬ್ಯಾಚ್ ಗಳ ವಿಚಾರವಾಗಿ ಕಂಪನಿಯವರನ್ನ ಪ್ರಾಸಿಕ್ಯೂಷನ್ ಗೆ ಒಳಪಡಿಸಬಹುದಲ್ಲ ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಅಲ್ಲದೇ ರಾಜ್ಯದ ಡ್ರಗ್ ಕಂಟ್ರೋಲ್ ಟೆಸ್ಟಿಂಗ್ ನಲ್ಲಿ NSQ ವರದಿ ಬಂದ ಮೇಲೆ ಸೆಂಟ್ರಲ್ ಡ್ರಗ್ ಲ್ಯಾಬ್ ನಲ್ಲಿ ಹೇಗೆ SQ ವರದಿ ಬರಲು ಸಾಧ್ಯ ಎಂಬುದರ ಕುರಿತು ಕುಲಂಕುಶವಾಗಿ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಔಷಧಿ ನಿಯಂತ್ರಣ ಅಧಿಕಾರಿಗೆ ಸಚಿವರು ಸೂಚನೆ ನೀಡಿದರು. ಸಮಯಕ್ಕೆ ಸರಿಯಾಗಿ ಔಷಧಿಗಳನ್ನ ಸೂಕ್ತ ರೀತಿಯಲ್ಲಿ ಟೆಸ್ಟಿಂಗ್ ನಡೆಸಿ.. ಜನರ ಜೀವದ ಜೊತೆ ಚೆಲ್ಲಾಟ ಆಡಬೇಡಿ.. ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಟೆಸ್ಟಿಂಗ್ ನಡೆಸುವ ಅಧಿಕಾರಿಗಳಿಗೆ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತರಾಟೆ ತೆಗೆದುಕೊಂಡರು.

ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಐವಿ ದ್ರಾವಣ ಕೂಡ ಒಂದು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ರೀತಿಯ ವರದಿಗಳಿರುವಾಗ ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳು ಏನು ಕ್ರಮ ವಹಿಸಿದ್ದಾರೆ. ಟೆಸ್ಟಿಂಗ್ ವರದಿಗಳನ್ನ ಶೀಘ್ರದಲ್ಲಿ ಕೊಡಬೇಕು. ಟೆಸ್ಟಿಂಗ್ ವರದಿಗಳನ್ನ ನೀಡಲು ವಿಳಂಭ ನೀತಿ ಏಕೆ. ಅಲ್ಲದೇ ಸೆಂಟ್ರಲ್ ಲ್ಯಾಬ್ ನಿಂದ ಕೂಡಾ ಟೆಸ್ಟಿಂಗ್ ವರದಿಗಳು ಬರುವುದು ವಿಳಂಭವಾಗುತ್ತಿರುವುದು ಏಕೆ. ನಿಮಗೆ ಜವಾಬ್ದಾರಿ ಇಲ್ಲವೇ ಎಂದು ಅಧಿಕಾರಿಗಳ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಗರಂ ಆದರು.

ಐವಿ ರಿಂಗರ್ ಲ್ಯಾಕ್ಟೇಟ್ ನ 192 ಬ್ಯಾಚ್ ಗಳಲ್ಲಿ ಟೆಸ್ಟಿಂಗ್ ಗೆ ಬಾಕಿ ಇರುವ ಬ್ಯಾಚ್ ಗಳ ವರದಿ ಶೀಘ್ರದಲ್ಲೇ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ತಾಕೀತು ಮಾಡಿದರು. ಅಲ್ಲದೇ NABL ಲ್ಯಾಬ್ ನಲ್ಲಿ 192 ಬ್ಯಾಚ್ ಗಳು ಐವಿ ದ್ರಾವಣ ಪಾಸಿಟಿವ್ ರಿಪೋರ್ಟ್ ಬಂದಿದ್ದು ಹೇಗೆ ಎಂದು ಪ್ರಶ್ನಿಸಿದ ಸಚಿವರು ಈ ಬಗ್ಗೆ ಪರಿಶೀಲನೆ ನಡೆಸಿ ಎಂದರು. ರಾಜ್ಯದ ಡ್ರಗ್ ಕಂಟ್ರೋಲ್ ನೀಡಿದ ವರದಿಯಲ್ಲಿ 22 ಬ್ಯಾಚ್ ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂದು ವರದಿಯಿದೆ. ಇದರಲ್ಲಿ ಸೆಂಟ್ರಲ್ ಲ್ಯಾಬ್ ನವರು 4 ಬ್ಯಾಚ್ ಗಳಿಗೆ ಮಾತ್ರ ಗುಣಮಟ್ಟ ಹೊಂದಿದೆ ಎಂದು ವರದಿ ನೀಡಿದ್ದಾರೆ. ಆದರೆ NABL ಲ್ಯಾಬ್ ನವರು 192 ಬ್ಯಾಚ್ ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿದೆ ಎಂದು ವರದಿ ನೀಡಿದ್ದಾರೆ. ಇದು ಹೇಗೆ ಸಾಧ್ಯ. ಈ ಬಗ್ಗೆ ಪರಿಶೀಲನೆ ನಡೆಸಿ. ಲ್ಯಾಬ್ ನವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಔಷಧಿ ಸರಬರಾಜು ನಿಗಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

BIG NEWS : ಬಾಣಂತಿಯರ ಸಾವು ಕೇಸ್ : ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ `FIR' ದಾಖಲಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ.! BIG NEWS: Minister Dinesh Gundu Rao orders registration of FIR against company supplying IV solution
Share. Facebook Twitter LinkedIn WhatsApp Email

Related Posts

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM1 Min Read

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

07/03/2026 8:14 PM1 Min Read

ಮಹಾತ್ಮ ಗಾಂಧೀಜಿಯವರ ಗ್ರಾಮ ರಾಜ್ಯ ಪರಿಕಲ್ಪನೆಯನ್ನು ಕಾಂಗ್ರೆಸ್ ಮೂಲೆಗುಂಪು ಮಾಡಿದೆ: ತೀ.ನ.ಶ್ರೀನಿವಾಸ್ ಕಿಡಿ

07/03/2026 7:57 PM2 Mins Read
Recent News

‘ಇದು ಐತಿಹಾಸಿಕ ಮೈಲಿಗಲ್ಲು’ : ನೇಪಾಳದಲ್ಲಿ ‘ಬಾಲೇಂದ್ರ ಶಾ’ ಗೆಲುವಿಗೆ ‘ಪ್ರಧಾನಿ ಮೋದಿ’ ಅಭಿನಂದನೆ

07/03/2026 9:03 PM

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

07/03/2026 8:14 PM

‘ಎಲ್ಲಾ ಮಿತಿಗಳನ್ನ ಮೀರಿದೆ’ : ರಾಷ್ಟ್ರಪತಿ ಮುರ್ಮು ಅವಮಾನಿಸಿದ ಟಿಎಂಸಿ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ಧಾಳಿ

07/03/2026 8:11 PM
State News
KARNATAKA

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

By kannadanewsnow0907/03/2026 8:26 PM KARNATAKA 1 Min Read

ಶಿವಮೊಗ್ಗ : ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದರ ಬಗ್ಗೆ ನನಗೆ ನಂಬಿಕೆ ಇಲ್ಲ. ಬದಲಾದ ದಿನಮಾನಗಳಿಗೆ ತಕ್ಕಂತೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು…

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

07/03/2026 8:14 PM

ಮಹಾತ್ಮ ಗಾಂಧೀಜಿಯವರ ಗ್ರಾಮ ರಾಜ್ಯ ಪರಿಕಲ್ಪನೆಯನ್ನು ಕಾಂಗ್ರೆಸ್ ಮೂಲೆಗುಂಪು ಮಾಡಿದೆ: ತೀ.ನ.ಶ್ರೀನಿವಾಸ್ ಕಿಡಿ

07/03/2026 7:57 PM

ಅಭಿವೃದ್ಧಿಗಾಗಿ ಸಿದ್ಧರಾಮಯ್ಯ ಮಾತ್ರವಲ್ಲ, ಪ್ರಧಾನಿ ಮೋದಿ ಸಹ ಸಾಲ ಮಾಡಿದ್ದಾರೆ: ಶಾಸಕ ಗೋಪಾಲಕೃಷ್ಣ ಬೇಳೂರು

07/03/2026 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.