ಚಿಕ್ಕಬಳ್ಳಾಪುರ : ಒಳಮೀಸಲು ಜಾರಿಗೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲು ಜಾರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಜಾರಿಗೆ ದತ್ತಾಂಶ ಬೇಕಿದ್ದು, ಈ ವಿಚಾರದಲ್ಲಿ ಜಸ್ಟೀಸ್ ನಾಗಮೋಹನ್‌ದಾಸ್ ಅವರ ಸಮಿತಿ ರಚಿಸಲಾಗಿದ್ದು, ವರದಿ ಬಂದ ಕೂಡಲೇ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಒಳ ಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಸಿ.ಮಹದೇವಪ್ಪ, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಅವರೊಂದಿಗೆ ಮಾತನಾಡಿದ್ದೇನೆ. ಸರ್ಕಾರ ಸಂಪೂರ್ಣವಾಗಿ ಒಳಮೀಸಲು ಪರವಾಗಿದೆ ಎಂದು ತಿಳಿಸಿದ್ದಾರೆ.