ಬೆಂಗಳೂರು : ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುವ ವೇಳೆ ಇಂದು ಬೆಳಿಗ್ಗೆ 6 ಗಂಟೆಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬಳಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಈಡಾಗಿತ್ತು.ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಂಎಲ್ಸಿ ಸಿಟಿ ರವಿ ಅವರು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್, ಅವರ ಸಹೋದರ ಚನ್ನರಾಜ್ ಹಟ್ಟಿಹೋಳಿ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಕುರಿತು ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಟಿ ರವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿ.ಟಿ ರವಿ ಅವರು, ಕಿತ್ತೂರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಅವರ ಸಹೋದರ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಿ.ಟಿ ರವಿ ಮಧ್ಯೆ ನಡೆದ ಜಟಾಪಟಿ ರಾಜ್ಯಾದ್ಯಂತ ಸದ್ದು ಮಾಡಿತ್ತು. ಇತ್ತೀಚಿಗೆ ಇದೇ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಮಂಗಳೂರು ಪೋಸ್ಟ್ ಆಫೀಸ್ ನಿಂದ ಸಿಟಿ ರವಿ ಅವರ ನಿವಾಸಕ್ಕೆ ಕೊಲೆ ಬೆದರಿಕೆ ಕೂಡ ಹಾಕಲಾಗಿತ್ತು. ತಿಗ ಸಿಟಿ ರವಿ ಅವರು ಸಚಿವೆ ಹಾಗೂ ಅವರ ಸಹೋದರ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.\
ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ.
— C T Ravi 🇮🇳 ಸಿ ಟಿ ರವಿ (@CTRavi_BJP) January 14, 2025