ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಎಂಎಲ್ಸಿ ಸಿಟಿ ರವಿ ಅವರು ಅವಾಚ್ಯವಾಗಿ ಪದ ಬಳಿಸಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಟಿ ರವಿ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ ಪೊಲೀಸರಿಗೂ ದೂರು ನೀಡಲು ಅವರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆ ಹಿನ್ನೆಲೆ ಏನು?
ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರು ಪ್ರಾಸ್ಟೂ* ಎಂಬ ಪದ ಬಳಕೆ ಮಾಡಿದ್ದಾರೆ. ಸಿ.ಟಿ. ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ ವೇ* ಎಂದು ಹೇಳಿದ್ದಾರೆ. ಈ ಪದವನ್ನು ಬಳಕೆ ಮಾಡಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೆಂಡಾಮಂಡಲವಾಗಿದ್ದಾರೆ. ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ.
ಈ ಬಗ್ಗೆ ಬಿಜೆಪಿ ಸದಸ್ಯರು ಸಿ.ಟಿ. ರವಿ ಅವರು ಹಾಗೇ ಮಾತನಾಡಿಲ್ಲ ಎಂದು ವಾದ ಮಾಡಿದ್ದಾರೆ. ಇನ್ನು ಈ ಘಟನೆ ನಡೆಯುವ ಸ್ವಲ್ಪ ಮುಂಚೆ ಸಿ.ಟಿ. ರವಿ ಹೊರಗೆ ಹೋಗಿದ್ದಾರೆ. ಸಿ.ಟಿ. ರವಿ ಹೊರಗೆ ಹೋದ ಬಳಿಕ ಗಲಾಟೆ ಜೋರಾಗಿ ಕಾಂಗ್ರೆಸ್ ಸದಸ್ಯರು ಕೂಡ ಹೊರಗೆ ಎದ್ದು ಹೋಗಿದ್ದಾರೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೀಡಿಯಾ ಗ್ಯಾಲರಿ ಬಳಿ ಬಂದು ತಮಗಾದ ನೋವಿನ ಬಗ್ಗೆ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ. ಇದರ ಬೆನ್ನಲ್ಲಿಯೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿಅವರ ವಿರುದ್ಧ ದೂರು ನೀಡಿದ್ದಾರೆ.