ಬೆಂಗಳೂರು : ರಾಜ್ಯದ ಎಲ್ಲಾ ಸಾರ್ವಜನಿಕ ಗ್ರಂಥಾಲಯಗಳಿಗೂ ಉಚಿತವಾಗಿ ವಿದ್ಯುತ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು. ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳ ರೀತಿಯಲ್ಲೇ ರಾಜ್ಯದ ಎಲ್ಲ ಸಾರ್ವಜನಿಕ ಗ್ರಂಥಾಲಯಗಳಿಗೂ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.