ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಧರ್ಮಸ್ಥಳ ಸತ್ಯ ಯಾತ್ರೆ ನಡೆಸಲಾಗಿತ್ತು. ಇದೀಗ ಇಂದು ಬಿಜೆಪಿ ನಾಯಕರು ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು ಇಂದು ಧರ್ಮಸ್ಥಳದಲ್ಲಿ ಸುಮಾರು ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿ ಬಳಿಕ ಮಧ್ಯಾಹ್ನ 2 ರಿಂದ 4.30 ವರೆಗೆ ಬೃಹತ್ ಸಮಾವೇಶ ಹಮ್ಮಿಕೊಂಡಿದೆ.
ಹೌದು ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಮಧ್ಯಾಹ್ನ ಧರ್ಮಸ್ಥಳದಲ್ಲಿ ಬಿಜೆಪಿ ನಾಯಕರಿಂದ ಪಾದಯಾತ್ರೆ ನಡೆಯಲಿದೆ. ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿದ ಬಳಿಕ ಬೃಹತ್ ಸಮಾವೇಶ ಮಾಡಲಿದ್ದಾರೆ. ಧರ್ಮಸ್ಥಳದಲ್ಲಿ ಎಸ್ ಡಿ ಎಮ್ ಕಾಲೇಜ್ ಮೈದಾನದಲ್ಲಿ ಈ ಒಂದು ಸಮಾವೇಶ ನಡೆಯಲಿದೆ ಇಂದು ಮಧ್ಯಾಹ್ನ 2 ರಿಂದ ಸಂಜೆ 4:30ರ ವರೆಗೆ ಸಮಾವೇಶ ನಡೆಯಲಿದೆ.
ಸಮಾವೇಶಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರಿಗೆ ಆಹ್ವಾನ ನೀಡಲಾಗಿದೆ. ಅಲ್ಲದೇ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರು, ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಎಂಎಲ್ಸಿ ಗಳು, ಸೋತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರಿಗೂ ಕೂಡ ಆಹ್ವಾನ ನೀಡಲಾಗಿದೆ. ಇಂದು ಒಂದು ಲಕ್ಷ ಜನರನ್ನು ಸೇರಿಸಿ ಸಮಾವೇಶಕ್ಕೆ ಬಿಜೆಪಿ ಮುಂದಾಗಿದೆ.