ದಕ್ಷಿಣಕನ್ನಡ : ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೃತ ಸುಹಾಸ್ ಶೆಟ್ಟಿ ಅಂತ್ಯಕ್ರಿಯೆಯಲ್ಲಿ ಬಿಜೆಪಿ ಹಲವು ನಾಯಕರು ಭಾಗಿಯಾಗಿದ್ದರು. ಈ ವೇಳೆ ಸುಹಾಸ್ ಶೆಟ್ಟಿ ಕುಟುಂಬಕ್ಕೆ ವೈಯಕ್ತಿಕವಾಗಿ 5 ಲಕ್ಷ ಕೊಡುತ್ತೇನೆ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಿಸಿದರು.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದು, ಹಿಂದೂ ಧರ್ಮ ಉಳಿಸಲು ಹೋರಾಟ ನಡೆಸುವವರನ್ನು ಮುಸ್ಲಿಂ ಭಯೋತ್ಪಾದಕರು ಕೊಂದು ಹಾಕುತ್ತಿದ್ದಾರೆ. ಇಂತಹವರನ್ನು ಸ್ಪಾಟ್ ನಲ್ಲಿ ಗುಂಡು ಹಾರಿಸುವ ಕೆಲಸ ಆಗಬೇಕಿದೆ. ಇಲ್ಲದಿದ್ದರೆ ದೇಶಕ್ಕಾಗಿ ದುಡಿಯುವವರಿಗೆ ಭಯದ ವಾತಾವರಣ ನಿರ್ಮಾಣವಾಗುತ್ತದೆ.
ಬಿಜೆಪಿ ಸರ್ಕಾರ ಇದ್ದಾಗಲೂ ಕಾರ್ಯಕರ್ತರಿಗೆ ರಕ್ಷಣೆ ಇರಲಿಲ್ಲ. ಹಿಂದೂ ಯುವಕರು ರಾತ್ರಿ ಹೊತ್ತು ಒಬ್ಬಂಟಿಯಾಗಿ ಓಡಾಡಬೇಡಿ. ಕರಾವಳಿಯಲ್ಲಿ ಆತ್ಮ ರಕ್ಷಣೆಗೆ ಆಯುಧ ಇಟ್ಟುಕೊಳ್ಳುವುದು ಅಗತ್ಯ. ಹಿಂದೂ ರಾಜ್ಯದಲ್ಲಿ ಬದುಕಲು ಕಷ್ಟವಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.