ಬೆಂಗಳೂರು : ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಹೃದಯ ಸಮಸ್ಯೆ ಕಾಣಿಸಿಕೊಂಡ ಸಂಬಂಧ ಭಾರತಿ ನಗರದ ರೌಡಿ ಶಿವಪ್ರಕಾಶ್ ಆಲಿಯಾಸ್ ಬಿಕ್ಷು ಶಿವ ಕೊಲೆ ಪ್ರಕರಣದ ಆರೋಪಿ, ಕೆ. ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜು ಅವರನ್ನು ಶುಕ್ರವಾರ ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಗುರುವಾರ ಸಂಜೆ ಬಂಧನಕ್ಕೊಳಗಾಗಿದ್ದ ಬೈರತಿ ಬಸವರಾಜುರನ್ನು ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ಜನಪ್ರ ತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದರು. ಆಗೆ ಬೌರಿಂಗ್ ಆಸ್ಪತ್ರೆ ವೈದ್ಯರ ವರದಿಯಲ್ಲಿ ಇಸಿಜಿಯಲ್ಲಿ ವ್ಯತ್ಯಾಸ ಉಲ್ಲೇಖವಾ ಗಿತ್ತು. ಈ ಸಂಗತಿಯನ್ನು ನ್ಯಾಯಾ ಲಯದ ಗಮನಕ್ಕೆ ತಂದು ಹೆಚ್ಚಿನ ಚಿಕಿತ್ಸೆಗೆ ಶಾಸಕರ ಪರ ವಕೀಲರು ಮನವಿ ಮಾಡಿದರು.
ಈ ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿ ಬಸವರಾಜು ಅವರಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಿ ಶನಿವಾರ ಗೃಹ ಕಚೇರಿಯಲ್ಲಿ ಹಾಜರುಪಡಿಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿತು. ಅಂತೆಯೇ ರಾತ್ರಿ 7 ಗಂಟೆಗೆ ಸುಮಾರಿಗೆ ಜಯನಗ ರದ 9ನೇ ಹಂತದಲ್ಲಿರುವ ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಾಸಕರನ್ನು ಕರೆದೊಯ್ದು ಅಧಿ ಕಾರಿಗಳು ದಾಖಲಿಸಿದ್ದಾರೆ. ಪ್ರಸುತ್ತ ವೈದ್ಯೋಪಾಚಾರಕ್ಕೆ ಶಾಸಕರು ಸ್ಪಂದಿಸಿ ದ್ದಾರೆ ಎಂದು ತಿಳಿದು ಬಂದಿದೆ.








