ನವದೆಹಲಿ : ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ 150 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಲೋಕಸಭೆಯಲ್ಲಿ ಈ ಕುರಿತ ಚರ್ಚೆಗೆ ಸೋಮವಾರ ಚಾಲನೆ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ಚರ್ಚೆಯನ್ನು ಪ್ರಾರಂಭಿಸಲಿದ್ದು, 10 ಗಂಟೆಗಳ ಕಾಲ ಚರ್ಚೆ ನಡೆಯಲಿದೆ.
1937ರಲ್ಲಿ ವಂದೇ ಮಾತ ರಂನ ಪ್ರಮುಖ ಚರಣಗಳಿಗೆ ಕಾಂಗ್ರೆಸ್ ಕತ್ತರಿ ಹಾಕಿತು ಎಂದು ಈ ಹಿಂದೆ ಪ್ರಧಾನಿ ಮೋದಿ ಆರೋಪಿಸಿದ್ದರು. ಇದನ್ನು ಪ್ರಸ್ತಾವಿಸಿ+ವಿಪಕ್ಷಗಳನ್ನು ತರಾಟೆಗೆತೆಗೆದುಕೊಳ್ಳುವ ಸಾಧ್ಯತೆಯಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೋದಿಯವರ ನಂತರ ಮಾತನಾಡಲಿದ್ದಾರೆ. ವಿಪಕ್ಷಗ ಳಿಂದ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೋಯ್ ಹಾಗೂ ಸಂಸದೆ ಪ್ರಿಯಾಂಕಾ ವಾದ್ರಾ ಚರ್ಚೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.ಇನ್ನು, ರಾಜ್ಯಸಭೆಯಲ್ಲಿ ಡಿ.9ರಂದು ಈ ಕುರಿತು ಚರ್ಚೆ ಆರಂಭವಾಗಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯಸಭೆಯ ನಾಯಕ ಜೆ.ಪಿ. ನಡ್ಡಾ ಚರ್ಚೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ.








