ಹೈದರಾಬಾದ್: ಆಫ್ರಿಕಾದ ನೈಜೀರಿಯಾದಲ್ಲಿ ಮಳೆ ಅಬ್ಬರಿಸುತ್ತಿದೆ. ಕಳೆದ 10 ವರ್ಷಗಳ ಬಳಿಕ ಭಾರಿ ಮಳೆ ಸುರಿಯುತ್ತಿದ್ದು, ನೈಝೀರಾ ದೇಶವು ಭಾರಿ ಮಳೆಯಿಂದ ತತ್ತರಿಸುತ್ತಿದೆ.
ಸತತ ಮಳೆಯಿಂದಾಗಿ 600 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮನೆಗಳು ಕೊಚ್ಚಿಹೋಗಿ ಮನೆಗಳು ಮುಳುಗಡೆಯಾಗಿರುವುದರಿಂದ ಸುಮಾರು 13 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಬೆಳೆಗಳು ತೀವ್ರವಾಗಿ ಹಾನಿಗೀಡಾಗಿವೆ ಎನ್ನಲಾಗಿದೆ.
ಎಚ್ಚರಿಕೆಗಳ ಹೊರತಾಗಿಯೂ ಜನರು ಸುರಕ್ಷಿತ ಸ್ಥಳಗಳಿಗೆ ತೆರಳದ ಕಾರಣ ಜೀವಹಾನಿ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. . ನೈಜೀರಿಯಾದ ಸಚಿವ ಸಾದಿಯಾ ಉಮರ್ ಫಾರೂಕ್ ಅವರು ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜನರು ಈಗಲಾದರೂ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ಅಪಾಯದ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಮತ್ತು ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಳೆಯಿಂದಾಗಿ ದೇಶಾದ್ಯಂತ ಸುಮಾರು 2 ಲಕ್ಷ ಮನೆಗಳು ಕೊಚ್ಚಿಹೋಗಿವೆ ಎಂದು ಅಂದಾಜಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಮಳೆ ಮತ್ತು ಪ್ರವಾಹವು ಮುಂದಿನ ತಿಂಗಳ ಅಂತ್ಯದವರೆಗೆ ಮುಂದುವರಿಯುವ ಸಾಧ್ಯತೆಯಿದೆ.