Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಭಾರತದ ಅತ್ಯಂತ ದೀರ್ಘಾವಧಿ ಪ್ರಧಾನಿ ಮೋದಿ: ಆತ್ಮೀಯ ಸ್ನೇಹಿತನಿಗೆ ಡೊನಾಲ್ಡ್ ಟ್ರಂಪ್ ಅಭಿನಂದನೆ!

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ : ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ
KARNATAKA

BIG NEWS : ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ : ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

By kannadanewsnow57

ಬಳ್ಳಾರಿ : ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ಹಾ ಅವರ ನೇತೃತ್ವದ ಆಯೋಗ ರಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿ.ಎಂ.ಯಡಿಯೂರಪ್ಪ ಅವರು ಇದೆಲ್ಲ ಸುಳ್ಳು ಎಂದರೆ ವಾಸ್ತವಾಂಶ ಬದಲಾಗಲ್ಲ. ಈ ಬಗ್ಗೆ ನ್ಯಾಯಾಲಯವಿದೆ, ಅಲ್ಲಿ ಸತ್ಯಾಸತ್ಯತೆ ಬಯಲಾಗಲಿದೆ.‌ ಬಿಜೆಪಿಯವರು ಎಲ್ಲವನ್ನೂ ಸುಳ್ಳು ಅಂತಾರೆ. ಅವರು ಸುಳ್ಳಿನ ಪಿತಾಮಹರು. ಯಡಿಯೂರಪ್ಪ ಅವರು ಸಿ.ಎಂ.ಆಗಿದ್ದಾಗ ಕೋವಿಡ್ ಹಗರಣಗಳನ್ನು ನಾನು ವಿರೋಧಪಕ್ಷದ ನಾಯಕನಾಗಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೆ. ಆಗಲೂ ಸಾಕಷ್ಟು ಅಂಶಗಳನ್ನು ದಾಖಲೆ ಸಹಿತ ಮಾತನಾಡಿದ್ದೆ. ಈಗ ಆಯೋಗದ ವರದಿ ಬರಲಿ, ನಂತರ ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಆಕ್ಸಿಜನ್ ಕೊರತೆಯಿಂದ ಜನರು ಮೃತಪಟ್ಟಿರುವ ದುರ್ಘಟನೆಗಳು ನಡೆದವು. ಇದನ್ನು ಸಚಿವರಾಗಿದ್ದ ಸುಧಾಕರ್ ಅವರು ಸುಳ್ಳು ಸುಳ್ಳು ಎಂದರು. ನಾನು ಮತ್ತು ಡಿ.ಕೆ ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ ಮೇಲೆ ಸರ್ಕಾರ ತನ್ನ ನಿರ್ಲಕ್ಷ್ಯ ಒಪ್ಪಿಕೊಂಡು, ಸಮಸ್ಯೆ ಸರಿಪಡಿಸಿ ಜನರಿಗೆ ಅನುಕೂಲ ಮಾಡಿಕೊಟ್ಟಿತು. ಶೀಘ್ರದಲ್ಲೇ ಸಿ.ಎಂ ರಾಜೀನಾಮೆ ನೀಡಲಿದ್ದಾರೆ ಎಂದು ಯಡಿಯೂರಪ್ಪ ಅವರು ಮಾತನಾಡಿದ್ದಾರೆ. ಚುನಾವಣಾ ಕಾರಣಕ್ಕೆ ಇಂತಹ ಹೇಳಿಕೆ ನೀಡುತ್ತಾರೆ. ನಾನು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳುವವನು. ನಾನು ಸಣ್ಣ ತಪ್ಪೂ ಮಾಡಿಲ್ಲ, ಮಾಡೋದು ಇಲ್ಲ, ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರು 2 ಸಾವಿರ ಕೋಟಿ ಕೊಟ್ಟು ಮುಖ್ಯಮಂತ್ರಿ‌ ಆದ್ರು.‌ ಇವರ ಪುತ್ರ ವಿಜಯೇಂದ್ರ ಕೂಡ ದುಡ್ಡು ಕೊಟ್ಟೇ ಪಕ್ಷದ ಅಧ್ಯಕ್ಷ ಆಗಿದ್ದು ಅಂತ ಯತ್ನಾಳ್ ಅವರೇ ಹೇಳಿದ್ದಾರೆ. ಇವರಿಗೆ ಸಾವಿರ ಸಾವಿರ ಕೋಟಿ ಎಲ್ಲಿಂದ ಬಂತು? ಇದರ ಸತ್ಯಾಸತ್ಯತೆ ಕೂಡ ಬಯಲಾಗಬೇಕು ಎಂದರು.

ಗೃಹಲಕ್ಷ್ಮಿಗೆ ಹಂಚಲು ಹಣ ಇಲ್ಲ ಎಂಬ ದೇವೇಗೌಡರ ಹೇಳಿಕೆ ಶುದ್ಧ ಸುಳ್ಳು. ಅಕ್ಟೋಬರ್ ವರೆಗೂ ಒಂದು ತಿಂಗಳದ್ದೂ ತಪ್ಪದೆ ಗೃಹಲಕ್ಷ್ಮಿ ಹಣ ನೀಡಿದ್ದೇವೆ ಅಂದರೆ ಏನು ಅರ್ಥ? ನವೆಂಬರ್ ತಿಂಗಳದ್ದೂ ಸದ್ಯದಲ್ಲೇ ಹಾಕುತ್ತೇವೆ. ವಕ್ಫ್ ಆಸ್ತಿ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತನ್ನ ಪ್ರಣಾಳಿಕೆಯಲ್ಲೇ ಬಿಜೆಪಿ ಘೋಷಿಸಿದೆ. ಬಿಜೆಪಿ ಸರ್ಕಾರವೇ 216 ಮಂದಿಯನ್ನು ಒಕ್ಕಲೆಬ್ಬಿಸಲು ನೋಟಿಸ್ ನೀಡಿತ್ತು. ಈಗ ನೋಟಿಸ್ ನೀಡಿದವರೇ ಸುಳ್ಳು ಹೇಳಿಕೆ ನೀಡುತ್ತಾ, ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ. ಇದು ನಮ್ಮ‌ ಸ್ಪಷ್ಟ ತೀರ್ಮಾನ.‌ ನೋಟಿಸ್ ಗಳನ್ನು ಹಿಂಪಡೆಯಬೇಕು ಎಂದು ಖಡಕ್ ಸೂಚನೆ ನೀಡಿದ್ದೇನೆ, ಚುನಾವಣೆ ಪ್ರಣಾಳಿಕೆಯಲ್ಲಿ ಅವರೇ ವಕ್ಫ್ ಆಸ್ತಿ ಒತ್ತುವರಿ ತೆರವು ಮಾಡುವುದಾಗಿ ಹೇಳಿ, ಈಗ ರಾಜಕೀಯಕ್ಕಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

alleges CM Siddaramaiah BIG NEWS: More than Rs 2000 CRORE SCAM TOOK PLACE DURING COVID-19 PERIOD
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

1 Min Read

ರಾಜ್ಯದ ಶಾಲಾ ಶಿಕ್ಷಕರಿಗೆ ಬಿಡುಗಡೆಯಾಯ್ತು ‘ಕರ್ತವ್ಯ’ ಆ್ಯಪ್‌ : ಇನ್ಮುಂದೆ ಮೊಬೈಲ್‌ ನಲ್ಲೇ `ಡಿಜಿಟಲ್ ಹಾಜರಾತಿ’ ಕಡ್ಡಾಯ!

1 Min Read

BIG NEWS : ಸರ್ಕಾರಿ ನೌಕರರಿಗೂ ಇದೆ ‘ಗೌಪ್ಯತೆಯ ಹಕ್ಕು’: ವೈಯಕ್ತಿಕ ಮಾಹಿತಿಗಾಗಿ `RTI’ ಬಳಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

1 Min Read
Recent News

​ಭಾರತದ ಅತ್ಯಂತ ದೀರ್ಘಾವಧಿ ಪ್ರಧಾನಿ ಮೋದಿ: ಆತ್ಮೀಯ ಸ್ನೇಹಿತನಿಗೆ ಡೊನಾಲ್ಡ್ ಟ್ರಂಪ್ ಅಭಿನಂದನೆ!

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ಪುಣೆಯಲ್ಲಿ ಇಂದು ಕಾಕ್ರೋಚ್ ಜನತಾ ಪಾರ್ಟಿ ಅಭಿಯತ್ ದಿಪ್ಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ !

State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ…

ರಾಜ್ಯದ ಶಾಲಾ ಶಿಕ್ಷಕರಿಗೆ ಬಿಡುಗಡೆಯಾಯ್ತು ‘ಕರ್ತವ್ಯ’ ಆ್ಯಪ್‌ : ಇನ್ಮುಂದೆ ಮೊಬೈಲ್‌ ನಲ್ಲೇ `ಡಿಜಿಟಲ್ ಹಾಜರಾತಿ’ ಕಡ್ಡಾಯ!

BIG NEWS : ಸರ್ಕಾರಿ ನೌಕರರಿಗೂ ಇದೆ ‘ಗೌಪ್ಯತೆಯ ಹಕ್ಕು’: ವೈಯಕ್ತಿಕ ಮಾಹಿತಿಗಾಗಿ `RTI’ ಬಳಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.