ಬೀದರ್ : ಬೀದರ್ ನ ಜಿಲ್ಲಾ ಆಸ್ಪತ್ರೆಯಲ್ಲಿ ಮೂರು ಮಕ್ಕಳಿಗೆ ತಾಯಿ ಒಬ್ಬರು ಜನ್ಮ ನೀಡಿದ್ದಾರೆ. ಬಸಮ್ಮ ಎನ್ನುವವರು ಎರಡನೇ ಹರಿಗೆಯಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ ಎರಡು ಗಂಡು ಹಾಗೂ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಸದ್ಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೊದಲನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಸಮ್ಮ, ಇದೀಗ 2 ವರ್ಷದ ಬಳಿಕ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಕ್ಕಳು ಇಬ್ಬರು ಸಹ ಆರೋಗ್ಯವಾಗಿದ್ದಾರೆ.








