ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಅಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರೀಯ ಹದ್ಮಾರಿ 169ಎ ತೀರ್ಥಹಳ್ಳಿ- ಮಲೆ ರಸ್ತೆಯ ಆಗುಂಬೆ ಘಾಟೆಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ದಿನಾಂಕ:15-06-2025 ರಿಂದ 30-09-2025 ರವರೆಗೆ ಸದರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಉಲ್ಲೇಖ(1)ರ ಪತ್ರದಲ್ಲಿ ಕೋರಲಾಗಿದೆ.ಈ ವಿಚಾರದಲ್ಲಿ ಉಲ್ಲೇಖ(2)ರಂತೆ ಪೊಲೀಸ್ ಇಲಾಖೆಯಿಂದ ವರದಿ ಪಡೆಯಲಾಗಿರುತ್ತದೆ ಎಂದಿದ್ದಾರೆ.
ಸದರಿಯವರ ಕೋರಿಕೆ ಹಾಗೂ ಪೊಲೀಸ್ ಇಲಾಖಾ ವರದಿಯನ್ನಯ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ಕಲಂ 221(ಎ) (2) & (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ ಮೂಲಕ ದಿನಾಂಕ:15-06-2025 ರಿಂದ 30-09-2025 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಿದ ಹಾಗೂ ಭಾರಿ ವಾಹನಗಳು ಈ ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಸಂಚರಿಸುವುದು ಅಂತ ತಿಳಿಸಿದ್ದಾರೆ.
ಈ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ
- ಉಡುಪಿ-ತೀರ್ಥಹಳ್ಳಿಗೆ ಸಂಚರಿಸುವಂತ ಭಾರಿ ವಾಹನಗಳು ಉಡುಪಿ-ಕುಂದಾಪುರ ಸಿದ್ಯಾಪುರ ಮಾಸ್ತಿಕಟ್ಟೆ-ತೀರ್ಥಹಳ್ಳಿಗೆ ತೆರಳುವಂತೆ ಸೂಚಿಸಲಾಗಿದೆ.
- ಉಡುಪಿ-ತೀರ್ಥಹಳ್ಳಿಗೆ ಉಡುಪಿ-ಕಾರ್ಕಳ-ಮಾಳ ಘಾಟೆ-ಶೃಂಗೇರಿ-ತೀರ್ಥಹಳ್ಳಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಿಳಿಸಲಾಗಿದೆ.