ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೀಡಿದ್ದ 14 ನಿವೇಶನಗಳ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇದೀಗ ಇಡಿ ಅಧಿಕಾರಿಗಳ ಈ ಒಂದು ವಿಚಾರಣೆಗೆ ಸ್ವತಹ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ಬೆಚ್ಚಿಬಿದ್ದಿದ್ದಾರೆ. ಹೌದು ನಿನ್ನೆ ಮುಡಾ ಕಚೇರಿಯ ಮೇಲೆ ದಾಳಿ ಮಾಡಿದ ಹಿಡಿ ಅಧಿಕಾರಿಗಳು ಇಂದು ಕೂಡ ತನಿಖೆಯನ್ನು ಮುಂದುವರಿಸಿದ್ದಾರೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಇಡಿ ಅಧಿಕಾರಿಗಳ ತನಿಖಾ ಪ್ರಕ್ರಿಯೆಯನ್ನು ಕಂಡು ಸ್ವತಃ ಮುಡಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೆಚ್ಚಿಬಿದ್ದಿದ್ದಾರೆ.
ಅಧಿಕಾರಿಗಳ ಮೊಬೈಲ್ ಪರಿಶೀಲನೆ!
ಇಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ಕಡತಗಳು ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡುವುದರ ಜೊತೆಗೆ ಕಚೇರಿಯ ಎಲ್ಲಾ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಮೊಬೈಲ್ ಗಳನ್ನು ಸಹ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಮುಡಾದಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಾಗಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಮುಡಾ ಕಚೇರಿಯ ಪ್ರತಿಯೊಬ್ಬರ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ವಿಚಾರಣೆ ನಡೆಸುತ್ತಿದ್ದು, ಅದರ ಜೊತೆಗೆ ಅವರ ಮೊಬೈಲ್ ಗಳನ್ನು ಸಹ ವಿಷಕ ಪಡೆದು ಪರಿಶೀಲನೆ ಮಾಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಮುಡಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೆಚ್ಚಿಬಿದ್ದಿದ್ದಾರೆ.