Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜಕಾರಣಕ್ಕೆ ವಾಪಸ್ಸು ಬರುವುದರ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

ರಾಜ್ಯದ 230 KSRTC ಬಸ್ ನಿಲ್ದಾಣಗಳಲ್ಲಿ ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ನೇರ ಪ್ರಸಾರ

BIG NEWS: ಡಿ.ಕೆ ಶಿವಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕರು ಆಗಮನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಮುಡಾ’ ಹಗರಣ : `CM ಸಿದ್ದರಾಮಯ್ಯ’ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆ!
KARNATAKA

BIG NEWS : ‘ಮುಡಾ’ ಹಗರಣ : `CM ಸಿದ್ದರಾಮಯ್ಯ’ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆ!

By kannadanewsnow57

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಸೋಮವಾರ ಸಿದ್ದರಾಮಯ್ಯ ಅವರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಇದರ ಮಧ್ಯ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸರ್ಕಾರ &  ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರನ್ನು ದಾಖಲಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಅಕ್ರಮವಾಗಿ 14 ಸೈಟ್ ಹಂಚಿಕೆ ವಿಚಾರದ ಕುರಿತು ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರಿಗೆ ಮತ್ತೊಮ್ಮೆ ದೂರು ನೀಡಿದ್ದಾರೆ. 2023ರ ನ.03 ರಂದು ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ವರದಿಯನ್ನು ಮುಚ್ಚಿಡಲಾಗಿದೆ ಎಂದು ನೇರವಾಗಿ ಸಿಎಂ ವಿರುದ್ಧ ಆರೋಪ ಮಾಡಿದ್ದಾರೆ. ಈ ಮೂಲಕ ಸಾವಿರಾರು ಕೋಟಿ ರೂ. ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ಸರ್ಕಾರಿ ಅಧಿಕಾರಿಗಳು ಹಿಂಪಡೆದುಕೊಳ್ಳದೇ ಸುಮ್ಮನಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಮುಡಾ ಹಗರಣದ ಬಗ್ಗೆ ದೂರು ನೀಡಿದ ನಂತರ ರಾಜ್ಯಪಾಲರಿಗೆ ಸರ್ಕಾರದಿಂದ 2024ರ ಜುಲೈ27ರಂದು ರಾಜ್ಯಪಾಲರಿಗೆ ನೀಡಿರುವ ವರದಿಯಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿ ಮುಚ್ಚಿಡಲಾಗಿದೆ. ತಾಂತ್ರಿಕ ಸಲಹಾ ಸಮಿತಿ ವರದಿಯಲ್ಲಿ 50:50 ಅನುಪಾತದಲ್ಲಿ ಸೈಟ್ ಹಂಚಿಕೆ ಕಾನೂನು ಬಾಹಿರ ಎಂದು ಉಲ್ಲೇಖಿಸಲಾಗಿದೆ. ಆದರೆ, ಈಗ ಹಿಂದಿನ ಮುಡಾ ಅಧ್ಯಕ್ಷ ದಿನೇಶ್ ಕುಮಾರ್ ಅವರನ್ನ ಅಮಾನತು ಮಾಡಲಾಗಿದೆ. ಆದರೆ, ಅಕ್ರಮವಾಗಿ ನೀಡಿರುವ ಸೈಟ್ ಹಿಂಪಡೆಯದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಅಲ್ಲದೆ ಇದೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು.ವಿಚಾರಣೆಯ ವೇಳೆ ಸರ್ಕಾದ ಪರ ವಕೀಲ ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು. ಬಳಿಕ ದೂರುದರ ಸ್ನೇಹಮಯಿ ಕೃಷ್ಣ ಅವರ ಪರವಾಗಿ ವಕೀಲೆ ಲಕ್ಷ್ಮೀ ಅಯ್ಯಂಗಾರ್ ವಾದ ಮಂಡಿಸಿದರು. ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾ. ಎಂ.ನಾಗಪ್ರಸನ್ನ ಅವರು, ಸೆಪ್ಟೆಂಬರ್ 12ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದರು. ಈ ಮೂಲಕ ಇನ್ನೆರಡು ದಿನ ಸಿಎಂ ಸಿದ್ದರಾಮಯ್ಯಗೆ ರಿಲೀಫ್ ಸಿಕ್ಕಂತಾಗಿದೆ.

BIG NEWS : 'ಮುಡಾ' ಹಗರಣ :`CM ಸಿದ್ದರಾಮಯ್ಯ' ವಿರುದ್ಧ ಮತ್ತೊಂದು ದೂರು ದಾಖಲು! BIG NEWS: MUDA scam: Another complaint filed with Governor against CM Siddaramaiah
Share. Facebook Twitter LinkedIn WhatsApp Email

Related Posts

ರಾಜಕಾರಣಕ್ಕೆ ವಾಪಸ್ಸು ಬರುವುದರ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

1 Min Read

ರಾಜ್ಯದ 230 KSRTC ಬಸ್ ನಿಲ್ದಾಣಗಳಲ್ಲಿ ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ನೇರ ಪ್ರಸಾರ

1 Min Read

BIG NEWS: ಡಿ.ಕೆ ಶಿವಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕರು ಆಗಮನ

1 Min Read
Recent News

ರಾಜಕಾರಣಕ್ಕೆ ವಾಪಸ್ಸು ಬರುವುದರ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

ರಾಜ್ಯದ 230 KSRTC ಬಸ್ ನಿಲ್ದಾಣಗಳಲ್ಲಿ ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ನೇರ ಪ್ರಸಾರ

BIG NEWS: ಡಿ.ಕೆ ಶಿವಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕರು ಆಗಮನ

ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ ಡಿ.ಕೆ.ಶಿವಕುಮಾರ್

State News
KARNATAKA

ರಾಜಕಾರಣಕ್ಕೆ ವಾಪಸ್ಸು ಬರುವುದರ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 1 Min Read

ಬೆಂಗಳೂರು : ಬೆಂಗಳೂರು ನಗರದಲ್ಲಿ ಆಯೋಜನೆಯಾಗಿದ್ದ ರಾಜಕೀಯದ ಅತ್ಯಂತ ಪ್ರಮುಖ ಸಾಂವಿಧಾನಿಕ ಕಾರ್ಯಕ್ರಮವೊಂದರಲ್ಲಿ ಸ್ಯಾಂಡಲ್‌ವುಡ್ ಚಿತ್ರರಂಗದ ಮಾಜಿ ಸ್ಟಾರ್ ನಟಿ…

ರಾಜ್ಯದ 230 KSRTC ಬಸ್ ನಿಲ್ದಾಣಗಳಲ್ಲಿ ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ನೇರ ಪ್ರಸಾರ

BIG NEWS: ಡಿ.ಕೆ ಶಿವಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕರು ಆಗಮನ

ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ ಡಿ.ಕೆ.ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.