ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ.
ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಅರ್ಜಿ ವಜಾ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಇಂದು ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆಯೂ ಮನವಿ ಮಾಡಲಿದ್ದಾರೆ. ಹೈಕೋರ್ಟ್ ತಡೆಯಾಜ್ಞೆ ನೀಡಿದರೆ ಸಿದ್ಧರಾಮಯ್ಯಗೆ ತನಿಖೆಯಿಂದ ರಿಲೀಫ್ ಸಿಕ್ಕಂತಾಗಲಿದೆ. ಇನ್ನು ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿ ಎತ್ತಿ ಹಿಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸಿಎಂ ಸಿದ್ಧತೆ ನಡೆಸಿದ್ದಾರೆ.