ಬೆಂಗಳೂರು : ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಇದೀಗ ಈ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇದೀಗ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ಮಂಗಳವಾರ ಬೆಳಗ್ಗೆ 7.30 ಕ್ಕೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಸೋಮವಾರ ವಾಟ್ಸ್ ಆ್ಯಪ್ ಮೂಲಕ ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ ಹಗರಣ ಸಂಬಂಧ ಮುಂದಿನ ತನಿಖೆ ಪ್ರಕ್ರಿಯೆ ಕುರಿತು ಲೋಕಾಯುಕ್ತ ಮುಖ್ಯಸ್ಥರ ಜತೆ ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಮಾ ಲೋಚನೆ ನಡೆಸಿದ್ದು, ಸಿದ್ದರಾಮಯ್ಯಗೆ ನೊಟೀಸ್ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.