ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬೀಳಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಜಿಲ್ಲೆಗಳ ಡಿಸಿಪಿ, ಎಸ್ ಪಿಗಳಿಗೆ ಸೂಚನೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತರ ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾಗಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳು ಡಿಸಿಪಿ, ಎಸ್ ಪಿಗಳಿಗೆ ಸೂಚನೆ ನೀಡಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ಅಭಿಮಾನಿಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದ ಬಳಿ 2 ಕೆಎಸ್ ಆರ್ ಪಿ ತುಕಡಿ ಹಾಗೂ ಒಂದು ಬಿಎಂಟಿಸಿ ಬಸ್ ನಿಯೋಜಿಸಲಾಗಿದೆ.