ರಾಮನಗರ : ರಾಜ್ಯದ ರಾಮನಗರ ಜಿಲ್ಲೆಯ ಮಾಗಡಿ ಪೋಲೀಸರು ಮುಂಬೈನಲ್ಲಿ ಬಹುದೊಡ್ಡ ಕಾರ್ಯಾಚರಣೆ ನಡೆಸಿದ್ದು, ರಾಜ್ಯದ ಪೊಲೀಸರ ಕಾರ್ಯಾಚರಣೆಗೆ ಸ್ವತಃ ಮುಂಬೈ ಪೊಲೀಸರೇ ಬಿಗ್ ಶಾಕ್ ಗೆ ಒಳಗಾಗಿದ್ದಾರೆ.
ಹೌದು ಮುಂಬೈ ಏರ್ಪೋರ್ಟ್ ಮುಖಾಂತರ ಬಹ್ರೆನ್ ಗೆ ಪರಾರಿಯಾಗಲು ಯತ್ನಿಸಿದ್ದ ಇಬ್ಬರೂ ಕುಖ್ಯಾತಿ ಕಳ್ಳರನ್ನು ರಾಜ್ಯದ ರಾಮನಗರ ಜಿಲ್ಲೆಯ ಮಾಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಹ್ರೆನ್ ಗೆ ಪರಾರಿ ಆಗಲು ಯತ್ನಿಸುತ್ತಿದ್ದ ಕುಖ್ಯಾತಿ ಕಳ್ಳರಿಬ್ಬರ ಬಂಧನವಾಗಿದ್ದು, ಬಂಧಿತರನ್ನು ಕಡೂರು ಸಾಧಿಕ್ (40) ಹಾಗೂ ಹಮ್ಜಾ ಅಲಿಯಾಸ್ ಅಮೀರ್ (39) ಎಂದು ತಿಳಿದುಬಂದಿದೆ.
ಕಳೆದ 1 ತಿಂಗಳಿಂದ ಇಬ್ಬರು ಕಳ್ಳರನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಬಿಎಂಡಬ್ಲ್ಯು, ಸ್ಕೋಡಾ, ಎಸ್ಯುವಿ ಕಾರು ಖರೀದಿಸಿದ್ದರು. ಕಾರುಗಳ ನಂಬರ್ ಪ್ಲೇಟ್ ಬದಲಾಯಿಸಿ ತಲೆಮರೆಸಿಕೊಂಡಿದ್ದರು. ಮುಂಬೈ, ಗೋವಾ, ರಾಜಸ್ಥಾನ, ಮಹಾರಾಷ್ಟ್ರ ಸೇರಿ ಅನೇಕ ಕಡೆ ಸುತ್ತಾಟ ನಡೆಸಿದ್ದರು. ಬಳಿಕ ಬಹ್ರೇನ್ ದೇಶಕ್ಕೆ ತೆರಳಲು ಮುಂದಾಗಿದ್ದಾರೆ.
ಸೆ.22ರಂದು ಮಾಗಡಿ ಪಟ್ಟಣದ ದೇವಸ್ಥಾನವೊಂದರಲ್ಲಿ ಕಳ್ಳತನ ನಡೆದಿತ್ತು. ದೇವಸ್ಥಾನದಲ್ಲಿದ್ದ 5 ಕೆಜಿ ಬಂಗಾರ ದೋಚಿಕೊಂಡು ಪರಾರಿಯಾಗಿದ್ದರು. ಬ್ಯಾಡಗಿ ಶಾಸಕರ ನಿವಾಸದಲ್ಲೂ ಬಂಧಿತ ಆರೋಪಿಗಳು ಕನ್ನ ಹಾಕಿದ್ದರು.ಆರೋಪಿಗಳ ಸೆರೆಗೆ ಎಸ್ಪಿ ಕಾರ್ತಿಕ್ ರೆಡ್ಡಿ 4 ತಂಡಗಳನ್ನು ರಚಿಸಿದ್ದರು.
ಸದ್ಯ ಬಂಧಿತರಿಬ್ಬರು ಸುಮಾರು 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನಕಲಿ ಪಾಸ್ಪೋರ್ಟ್ ಬಳಸಿ ಏರ್ಪೋರ್ಟ್ ಪೊಲೀಸರನ್ನೇ ಯಾಮಾರಿಸಿದ್ದರು. ಇಬ್ಬರು ಆರೋಪಿಗಳ ಬಳಿ 1 ಗನ್ ಹಾಗೂ 5 ಜೀವಂತ ಗುಂಡು, 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 11,49,000 ನಗದು ಜಪ್ತಿ ಮಾಡಲಾಗಿದೆ.