ಬೆಂಗಳೂರು : ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಮುನಿರತ್ನಾಗೆ ಬೆಂಗಳೂರಿನ 82ನೇ ಸಿಸಿಹೆಚ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರಲಿದ್ದಾರೆ. ಆದರೆ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹೌದು ಜಾಮೀನು ಮಂಜೂರು ಮಾಡಿದ ಬಳಿಕ ಮುನಿರತ್ನ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ. ಆದರೆ ಬಿಡುಗಡೆಯಾದ ತಕ್ಷಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರ ಪೊಲೀಸರು ಮತ್ತೆ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಏಕೆಂದರೆ ನಿನ್ನೆ ಮಹಿಳೆಯೊಬ್ಬರು ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸೆಗಿದ್ದಾರೆ ಎಂದು ಆರೋಪಿಸಿ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು.
ಸಂತ್ರಸ್ಥ ಮಹಿಳೆಯ ದೂರಿನ ಅನ್ವಯ ಪೊಲೀಸರು ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಮುನಿರತ್ನ ಖಾಸಗಿ ರೆಸಾರ್ಟ್ ನಲ್ಲಿ ನನ್ನ ಮೇಲೆ ಅತ್ಯಾಚಾರ ಎಸೆಗಿದ್ದಾರೆ. ಅಲ್ಲದೆ ಅತ್ಯಾಚಾರ ಎಸಿಗಿದ್ದ ವಿಡಿಯೋ ಕೂಡ ತೋರಿಸಿ ಇದನ್ನು ಎಲ್ಲಾದರೂ ಬಾಯಿಬಿಟ್ಟರೆ ನಿನ್ನ ಗಂಡ ಮತ್ತು ಮಗನನ್ನು ಮುಗಿಸುತ್ತೇವೆ ಎಂದು ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಶಾಸಕ ಮುನಿರತ್ನ ಅವರನ್ನು ರಾಮನಗರ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಕೂಡಲೇ ಮತ್ತೆ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಪರಪ್ಪನ ಅಗ್ರಹಾರ ಜೈಲಿನ ಬಳಿ ಇದೀಗ ರಾಮನಗರ ಪೊಲೀಸರು ಆಗಮಿಸಿದ್ದು, ಬಾಡಿ ವಾರಂಟ್ ಮೇಲೆ ಅವರನ್ನು ಬಂಧಿಸಲಿದ್ದಾರೆ. ಶಾಸಕ ಮುನಿರತ್ನ ಅವರಿಗೆ, ಅಟ್ರಾಸಿಟಿ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದ್ದರೂ ಕೂಡ, ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ.