ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಇಂದು ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಇಂದು ಸಂತ್ರಸ್ತೆಯರು ನೀಡಿರುವ ಹೇಳಿಕೆಯ ವರದಿಯನ್ನು ತನಿಖಾಧಿಕಾರಿಗೆ ಸಲ್ಲಿಸಲಾಗುತ್ತದೆ.
ಸಿಆರ್ಪಿಸಿ ಸೆಕ್ಷನ್ 164 ಹೇಳಿಕೆ ಆಧರಿಸಿ ಶ್ರೀಗಳಿಗೆ ಇಂದು ಪೊಲೀಸರು ನೊಟೀಸ್ ಜಾರಿ ನೀಡಬಹುದು ಎನ್ನಲಾಗಿದ್ದು, ಇಂದು ಚಿತ್ರದುರ್ಗದ ಕೋರ್ಟ್ನಲ್ಲಿ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮುಂಜಾಗ್ರತಾ ಕ್ರಮವಾಗಿ ಮಠಕ್ಕೆ ಪೊಲೀಸ್ ಕಣ್ಗಾವಲಿದೆ. ಈ ಮಧ್ಯೆ, ಮಠದ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್ ವಿರುದ್ಧ ಹಾಸ್ಟೆಲ್ ವಾರ್ಡನ್ ರಶ್ಮಿ ನೀಡಿರುವ ದೂರಿನ ಮೇಲೆ ತನಿಖೆ ಮುಂದುವರಿದಿದೆ.
ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ ಸಂಬಂಧ ಚಿತ್ರದುರ್ಗ ಎಸ್ಪಿ ಪರಶುರಾಮ್ಗೆ ಎನ್ಸಿಪಿಸಿಆರ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ ಉತ್ತರಿಸಲು NCPCR ನೋಟಿಸ್ ನೀಡಿದೆ. ಸುಮೊಟೊ ಕೇಸ್ ದಾಖಲಿಸಿಕೊಂಡು NCPCR ನೋಟಿಸ್ ಹಿನ್ನೆಲೆ ಪೊಲೀಸ್ ಇಲಾಖೆ ಹೈಅಲರ್ಟ್ ಆಗಿದೆ.
Rain In Karnataka : ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ