ಮೈಸೂರು : ರಾಜ್ಯ ರಾಜಕಾರಣದಲ್ಲಿ ದಿನೊವೊಂದಕ್ಕೆ ಬದಲಾವಣೆ ಆಗಿತ್ತಿದ್ದೂ, ಇನ್ನೊಂದು ಕಡೆ ಸಚಿವ ಸಂಪುಟ ಪುನಾರಚನೆ ಆಗೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಇದೀಗ ನವೆಂಬರ್ ಕ್ರಾಂತಿ ವಿಚಾರ ನನಗೆ ಗೊತ್ತಿಲ್ಲ. ಐದು ವರ್ಷ ನಮ್ಮ ತಂದೆ ಸಿದ್ದರಾಮಯ್ಯ ಸಿಎಂ ಆಗಿ ಇರಬೇಕು. ಆಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ವಿಚಾರ ನನಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿ ಪ್ರಕಾರ ಹೈಕಮಾಂಡ್ ಆಗ್ಲಿ ಬೇರೆ ನಾಯಕರಾಗಲಿ ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ. ಹೀಗಾಗಿ ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ ಎಂದರು.
ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ. ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ದರೆ ಶಾಸಕರು ಸುಮ್ಮನೆ ಇರುತ್ತಿರಲಿಲ್ಲ. ಹೈಕಮಾಂಡ್ ಹೋಗಿ ದೂರು ಕೊಡುತ್ತಿದ್ದರು ಎಂದರು.








